ಚನ್ನಪಟ್ಟಣ: ಕುಟುಂಬದ ಗಲಾಟೆ ನಿಲ್ಲಿಸಲು ಬಂದ ಪೊಲೀಸ್ ಪೇದೆ ತನ್ನ ಮೇಲೆ 4 ಬಾರಿ ಅತ್ಯಾಚಾರ ಮಾಡಿದ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ರಾಮನಗರದಲ್ಲಿ ಡಿಎಆರ್ ಪೇದೆಯೊಬ್ಬರ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದು, ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ.
ಇದೀಗ ಮಹಿಳೆ ಎಂ.ಕೆ.ದೊಡ್ಡಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಯಾವುದೋ ಗಲಾಟೆ ಪ್ರಕರಣ ಸಂಬಂಧ ಸಂತ್ರಸ್ಥ ಮಹಿಳೆ 112 ಗೆ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ 112 ವಾಹನದ ಚಾಲಕ ಡಿಎಆರ್ ಪೇದೆ ಪುಟ್ಟಸ್ವಾಮಿ ಸಂತಸ್ಥ ಮಹಿಳೆಯ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯಿಂದ ಪೋನ್ ನಂಬರ್ ಪಡೆದು ಸಲುಗೆ ಬೆಳೆಸಿಕೊಂಡಿದ್ದ. ಬಳಿಕೆ ಆಕೆಗೆ ಹತ್ತಿರವಾಗಿ ವಿವಿಧ ಸಂದರ್ಭಗಳಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ರೀತಿ ಪೇದೆ ಪುಟ್ಟಸ್ವಾಮಿ ತನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ಪೇದೆ ಪುಟ್ಟಸ್ವಾಮಿ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಸಂಬಂಧ ಈಗಾಗಲೇ ಎಸ್ ಪಿ ಶ್ರೀನಿವಾಸ್ ಗೌಡ ಪೇದೆಯನ್ನ ಅಮಾನತು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC