ಸರಗೂರು: ತಾಲ್ಲೂಕು ಚಿಕ್ಕದೇವಮ್ಮನ ಬೆಟ್ಟದ ಸುತ್ತಮುತ್ತಲು ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ಹಾವಳಿ ಹಾಗೂ ಕಾಡು ಪ್ರಾಣಿಗಳಿಂದ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದರೂ, ಅರಣ್ಯಾಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಗ್ರಾ.ಪಂ. ಸದಸ್ಯ ಪುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಸುತ್ತಮುತ್ತಲ ಗ್ರಾಮಗಳಾದ ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು ಹಾಗೂ ದಡದಹಳ್ಳಿ ಗ್ರಾಮದ ರೈತರು ಬೆಳೆದಂತಹ ಬೆಳೆ ಕಾಡುಪ್ರಾಣಿಗಳಿಂದಾಗಿ ನಾಶವಾಗುತ್ತಿದೆ. ಇತ್ತ ಅರಣ್ಯಾಧಿಕಾರಿಗಳು ಬೆಳೆನಾಶಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಬೆಳೆ ನಷ್ಟ ನೀಡದೆ ಪರಿಹಾರವೂ ವರ್ಷಾನುಗಟ್ಟಲೆ ಕಾಯಿಸಿದ ನಂತರ ಬೆಳೆ ನಷ್ಟದ ಶೇ. 5% ನಷ್ಟನ್ನು ಮಾತ್ರ ಪರಿ ರೈತರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಅರಣ್ಯಾಧಿಕಾರಿಗಳ ಈ ಬೇಜವಬ್ದಾರಿತನ ಹಾಗೂ ನಿರ್ಲಕ್ಷವನ್ನು ಖಂಡಿಸಿ ಎಲ್ಲಾ ಗ್ರಾಮಗಳ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಗ್ರಾಪಂ ಸದಸ್ಯ ಪುಟ್ಟು ಎಚ್ಚರಿಕೆ ನೀಡಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


