ಕೊರಟಗೆರೆ : ಪಾವಗಡದಿಂದ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸನ್ಮಾನಿಸಿದರು.
ಪಾವಗಡ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಳೆ ಹಾಗೂ ಮೋಡಕವಿದ ವಾತಾವರಣ ಇರುವ ಕಾರಣ ರಸ್ತೆ ಮೂಲಕ ಸಂಚಾರ ಮಾಡಿದರು.
ಗೃಹಸಚಿವ ಕ್ಷೇತ್ರವಾದ ಕೊರಟಗೆರೆ ಬೈಪಾಸ್ ಬಳಿ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸನ್ಮಾನಿಸಿ ಗೌರವಿಸಿದರು.
ಇದೆ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಶ್ವಥ್ ನಾರಾಯಣ್, ಅರಕೆರೆ ಶಂಕರ್, ವಾಲೆಚಂದ್ರಯ್ಯ, ಮಾಜಿ ಜಿಪಂ ಅಧ್ಯಕ್ಷೆ ಪ್ರೇಮ ಮಹಾಲಿಂಗಪ್ಪ, ಜಯಮ್ಮ, ಬೈರೇಶ್, ಕಾರ್ ಮಹೇಶ್, ಟಿ.ಸಿ.ರಾಮಯ್ಯ, ಮೈಲಾರಪ್ಪ, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC