ಮಂಡ್ಯ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಮೂಲದ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಭರತ್ ಮೊದಲ ವರ್ಷದ ಪರೀಕ್ಷೆಗಳಿಗೆ ಗೈರಾಗಿದ್ದ. ಅಲ್ಲದೇ ಕಾಲೇಜಿಗೂ ಸಹ ಭರತ್ ಸರಿಯಾಗಿ ಹೋಗುತ್ತಿರಲಿಲ್ಲ. ಫುಟ್ಬಾಲ್ ಆಟದಲ್ಲಿ ಭರತ್ ಹೆಚ್ಚಿನ ಆಸಕ್ತಿ ಹೊಂದಿದ್ದ. ಮೊದಲ ವರ್ಷ ಗೈರು ಆಗಿದ್ದ ಪರೀಕ್ಷೆಗಳನ್ನು ಈ ಬಾರಿ ಪಾಸ್ ಮಾಡಿಕೊಳ್ಳಬೇಕೆಂದು ಪರೀಕ್ಷಾ ಶುಲ್ಕವನ್ನು ಕಟ್ಟಲು ಭರತ್ ಮುಂದಾಗಿದ್ದ ಎನ್ನಲಾಗಿದೆ.
ಭಾನುವಾರ ರಾತ್ರಿ 12 ಗಂಟೆವರೆಗೆ ಹಾಸ್ಟೆಲ್ ನ ವಿದ್ಯಾರ್ಥಿಗಳೊಂದಿಗೆ ಭರತ್ ಮಾತನಾಡಿದ್ದಾನೆ. ಬಳಿಕ ತನ್ನ ಕೊಠಡಿಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC