ಯುವ ರಾಜ್ ಕುಮಾರ್ ನಟನೆಯ ‘ಎಕ್ಕ’ ಚಿತ್ರ ಕಳೆದ ವಾರ ತೆರೆಗಪ್ಪಳಿಸಿದೆ. ಈ ಚಿತ್ರ ಈ ಸಾಲಿನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪಿಆರ್ ಕೆ ಪ್ರೊಡಕ್ಷನ್ಸ್ ನ ಅಶ್ವಿನಿ ಪುನೀತ್ ರಾಜ್ ಕುಮಾರ್, ಜಯಣ್ಣ ಫಿಲ್ಮ್ಸ್ನ ಜಯಣ್ಣ ಮತ್ತು ಭೋಗೇಂದ್ರ ಹಾಗೂ ಕೆಆರ್ ಜಿ ಸ್ಟುಡಿಯೋಸ್ನ ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾಜ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಈ ಚಿತ್ರ ಕಳೆದ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ 6.12 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಶುಕ್ರವಾರ 1.45 ಕೋಟಿ ರೂ., ಶನಿವಾರ 1.35 ಕೋಟಿ ರೂ., ಭಾನುವಾರ 1.65 ಕೋಟಿ ರೂ., ಸೋಮವಾರ 0.78 ರೂಪಾಯಿ ಒಟ್ಟು 5.23 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಒಳ್ಳೆಯ ಚಿತ್ರಗಳನ್ನು ಮಾಡಿದರೆ ಜನ ಖಂಡಿತವಾಗಿಯೂ ಸಿನಿಮಾ ಮಂದಿರಕ್ಕೆ ಬರುತ್ತಾರೆ ಎನ್ನುವುದು ಸಾಬೀತಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಮಾದೇವ ಚಿತ್ರ ಕೂಡ ದೊಡ್ಡ ಯಶಸ್ಸನ್ನು ಪಡೆದಿದೆ. ಸಿನಿಮಾ ಮಂದಿರಗಳು ಕನ್ನಡ ಸಿನಿಮಾಗಳಿಗೆ ಹೆಚ್ಚು ಅವಕಾಶಗಳನ್ನ ನೀಡಬೇಕು ಎನ್ನುವ ಒತ್ತಾಯಗಳೂ ಕೇಳಿ ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC