nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡುಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡಬೇಕು: ರೈತರಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ July 22, 2025

    ಕಾಡುಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡಬೇಕು: ರೈತರಿಂದ ಪ್ರತಿಭಟನೆ

    By adminJuly 22, 2025No Comments2 Mins Read
    protest

    ಸರಗೂರು: ಕಾಡುಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡಬೇಕು, ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಲಂಕೆ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

    ಸೋಮವಾರ ಪಟ್ಟಣದ ಸರಗೂರು ವಲಯ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಕಾರರು, ರೈತರ ಜಮೀನುಗಳು ಕಾಡಂಚಿನ ಭಾಗಗಳಲ್ಲಿದ್ದು, ಈ ಭಾಗದಲ್ಲಿ ಬೆಳೆಯುವ ಹತ್ತಿ, ಜೋಳ, ಬಾಳೆ, ಕಬ್ಬು, ರಾಗಿ, ಭತ್ತ, ತೊಗರಿ, ತೋಟಗಾರಿಕ ಬೆಳೆಗಳು, ತರಕಾರಿ ಬೆಳೆಗಳಿಗೆ ಕಾಡುಪ್ರಾಣಿಗಳು ಹಾನಿ ಮಾಡುತ್ತಿವೆ. ಚಿಕ್ಕದೇವಮ್ಮನ ಬೆಟ್ಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಾವಳಿ ತಡೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವ್ಯಕ್ತಪಡಿಸಿದರು. ಸ್ಥಳಕ್ಕೆ ಅರಣ್ಯ ಇಲಾಖೆಯ ಮೇಲಾಧಿಕಾರಿಗಳು ಆಗಮಿಸಬೇಕು ಎಂದು ಪಟ್ಟು ಹಿಡಿದರು.


    Provided by
    Provided by

    ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್ ಮಾತನಾಡಿ, ಕಾಡಂಚಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾವಲು ಕಾಯಬೇಕು. ರೈಲ್ವೆ ಬ್ಯಾರಿಕೇಡ್ ನಿರ್ಮಿಸಬೇಕು. ಕಾಡಾನೆಗಳನ್ನು ಬೇರಡೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಕಾಡಾನೆಗಳ ಹಾವಳಿಯಿಂದಾದ ಬೆಳೆಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

    ಗ್ರಾ.ಪಂ. ಸದಸ್ಯ ಪುಟ್ಟು ಮಾತನಾಡಿ, ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಸರಕಾರ ಅನುದಾನ ಬಿಡುಗಡೆಗೊಳಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಚಿಕ್ಕದೇವಮ್ಮನ ಬೆಟ್ಟದ ಸುತ್ತಲಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಜೋರಾಗಿದ್ದು, ತಡೆಗೆ ಇಲಾಖೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

    ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನ್‌ ಗೌಡ ಮಾತನಾಡಿ, ಲಂಕೆ ಗ್ರಾಮದ ಕಾಡಂಚಿನಿಂದ ದಡದಹಳ್ಳಿ ಗ್ರಾಮದ ವರೆಗೆ ರೈಲ್ವೇ ಬ್ಯಾರಿಕೇಡ್ ಅಳವಡಿಸಬೇಕು. ಸೋಲಾರ್ ತಂತಿ ಅಳವಡಿಸಬೇಕು.  ಸ್ಥಳದಲ್ಲಿಯೇ ಸೂಕ್ತ ರೀತಿಯಲ್ಲಿ ಬೆಳೆಗೆ ನಷ್ಟ ಭರಿಸಬೇಕು. ಓಂಕಾರ್ ಮತ್ತು ನುಗು ಜಲಾಶಯದಂಚಿನಲ್ಲಿ ಶಾಶ್ವತ ಯೋಜನೆ ರೂಪಿಸಬೇಕು. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಲಾಖೆ ಕ್ರಮವಹಿಸಬೇಕು ಎಂದು ಹೇಳಿದರು.

    ಇದೇ ಸಂದರ್ಭ ರೈತರು ಡಿಸಿಎಫ್ ನಂದೀಶ್ ಲಕ್ಷ್ಮಣಶೆಟ್ಟಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ನಂದೀಶ್ ಲಕ್ಷಣಶೆಟ್ಟಿ, ಬೆಳೆ ಪರಿಹಾರ ಅರ್ಜಿಗಳು ವಿಲೇವಾಗಿದೆ ಅದನ್ನು ಇನ್ನೂ 15  ದಿನಗಳಲ್ಲಿ ಎಲ್ಲಾ ಅರ್ಜಿಗಳಿಗೆ ಪರಿಹಾರ ನೀಡಲಾಗುವುದು. ಆನೆಗಳನ್ನು ಬೇರಡೆ ಸ್ಥಳಾಂತರಿಸಲು ಕ್ರಮವಹಿಸಲಾಗುವುದು. ಇದಲ್ಲದೆ ಬ್ಯಾರಿಕೇಡ್ ನಿರ್ಮಾಣಕ್ಕೆ ಮುಂದಾಗಲಾಗುವುದು. ಈಗಾಗಲೇ ನೀಡಲಾದ ಬೇಡಿಕೆಗಳನ್ನು ಅರಣ್ಯ ಸಚಿವರು, ಮೇಲಾಧಿಕಾರಿಗಳ ಗಮನಕ್ಕೆ ತಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಎಸಿಎಫ್‌ ಗಳಾದ  ಸುಮಿತ್ರಾ ಎಸ್.ಪರಮೇಶ್, ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಗಂಗಾಧರ್, ಪಿಎಸ್‌ ಐಗಳಾದ ಕಿರಣ್, ಚಂದ್ರಹಾಸ, ಕ್ರೈಂ ಬ್ರಾಂಚ್ ಇನ್‌ಸ್ಪೆಕ್ಟರ್ ಗೋಪಾಲ್, ಆರ್‌ ಎಫ್‌ ಓಗಳಾದ ಮಹಾಲಕ್ಷ್ಮಿ, ವಿವೇಕ್, ಡಿಆರ್‌ ಎಫ್‌ ಓ ಅಕ್ಷಯ್ ಕುಮಾರ್, ದಿಲೀಪ್ ಕುಮಾರ್, ನೀತಿನ್ ಸೇರಿದಂತೆ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಪದಾಧಿಕಾರಿಗಳು, ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು, ದಡದಹಳ್ಳಿ ಹಾಗೂ ಕಾಡಂಚಿನ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.