ಸರಗೂರು: ತಾಲೂಕಿನ ಬಿ ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದ ನಾಗಪ್ಪ ಎಂಬುವರ ಮಗನಾದ ಪ್ರಸನ್ನ ಸೇರಿದ ಜಮೀನಲ್ಲಿ ಸೋಮವಾರದಂದು ಹುಲಿ ಹೆಜ್ಜೆ ಗುರುತು ಕಂಡು ಬಂಕವಾಡಿ ಗ್ರಾಮ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಭಾನುವಾರಂದು ರಾತ್ರಿ ಹುಲಿ ಜಮೀನಿನಲ್ಲಿ ಕಾಣಿಸಿಕೊಂಡಿದೆ. ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತರು ಹುಲಿಯನ್ನು ಕಂಡು ಗಾಬರಿಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಗ್ರಾಮಸ್ಥರಿಗೆ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು, ಹುಲಿ ಜಮೀನಿನಲ್ಲೇ ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಹುಲಿಯನ್ನು ಸೆರೆಹಿಡಿಯಲು ಮೊಳೆಯೂರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹುಲಿ ಹೆಜ್ಜೆ ಗುರುತನ್ನು ಕಂಡು ಅತಂಕಕೊಳಗಿರುವ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದು, ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ, ಸ್ಥಳಕ್ಕೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಕಳೆದ ಒಂದು ತಿಂಗಳಿನಿಂದ ಹುಲಿ ಹಾಗೂ ಆನೆಗಳು ಹಾವಳಿಯಿಂದ ದಿನನಿತ್ಯ ಜಮೀನಲ್ಲಿ ಬೆಳೆಯನ್ನು ನಾಶ ಮಾಡಿಕೊಂಡು ಬರುತ್ತಿದ್ದೇವೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ಹುಲಿಯನ್ನು ಸೆರೆ ಹಿಡಿದು ಮುಂದಾಗುವ ಅನಾಹುತವನ್ನು ತಪ್ಪಿಸಬೇಕು ಎಂದು ಬಂಕವಾಡಿ ಗ್ರಾಮ ಮುಖಂಡ ಮಹೇಶ್ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC