ಔರಾದ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.
ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ 3 ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿತು.
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್ ಗಳು ತಲುಪುತ್ತಿಲ್ಲ, 40 — 50 ವಿದ್ಯಾರ್ಥಿಗಳಿಗೆ ಸೇರಿ 2–3 ಶೌಚಾಲಯಗಳು ಇವೆ, 100 ವಿದ್ಯಾರ್ಥಿಗಳು ಇರಬೇಕಾದ ವಸತಿ ನಿಲಯಗಳಲ್ಲಿ 140 — 150 ವಿದ್ಯಾರ್ಥಿಗಳನ್ನ ಇರಿಸುವಂತಾಗಿದೆ. ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ 1. 850 ರೂ ಮಾತ್ರ ನೀಡಲಾಗುತ್ತಿದೆ ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿ ಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುವುದಿಲ್ಲ ಹೀಗಾಗಿ ಸರಕಾರ ಈ ಹಣವನ್ನು ಹೆಚ್ಚಳ ಮಾಡಬೇಕು. ಈ ರೀತಿ ಹಲವಾರು ಸಮಸ್ಯೆಗಳು ರಾಜ್ಯದ ವಸತಿ ನಿಲಯಗಳಲ್ಲಿದ್ದು, ರಾಜ್ಯ ಸರ್ಕಾರ ತಕ್ಷಣವೇ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ವಿಶೇಷ ಅನುದಾನವನ್ನ ನೀಡಿ ಸುವ್ಯವಸ್ಥಿತ ಹಾಸ್ಟೆಲಗಳನ್ನು ನಿರ್ಮಾಣ ಮಾಡಬೇಕೆಂದು ಎಬಿವಿಪಿ ಆಗ್ರಹಿಸಿತು.
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ:
ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು. ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.
ಹೋರಾಟದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಶಿವಶರಣು ಚಾಂಬೋಳೆ, ರಾಜ್ಯಕಾರ್ಯಕಾರಣಿ ಸದಸ್ಯ ಸಂಗಮೇಶ ದ್ಯಾಡೆ, ಶಶಿಕಾಂತ ರಾಕಲೇ, ಸುರೇಶ, ಹಿರಿಯ ಕಾರ್ಯಕರ್ತರಾದ ಅಶೋಕ ಶೆಂಬೆಳ್ಳಿ, ಹಾವಪ್ಪ ಡ್ಯಾಡೆ, ಸುನಿಲ್ ಮೇತ್ರೆ, ಮಲ್ಲಿಕಾರ್ಜುನ ಟೆಕರಾಜ, ಅಂಬದಾಸ, ನೆಳಗೆ, ಕಾಲೇಜಿನ ವಿದ್ಯಾರ್ಥಿಗಳಾದ ಪೂಜಾ, ಗಂಗುಬಾಯಿ, ದೀಪ. ಭಾಗ್ಯಶ್ರೀ, ಸುಮಿತ್ರಾ, ಮಾರುತಿ, ಶಿವಪ್ರಸಾದ ಅನೇಕ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


