ಕೊರಟಗೆರೆ : ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ 44ನೇ ಜನ್ಮವರ್ಧಂತಿ ಅಂಗವಾಗಿ ಶ್ರೀ ಮಠದಲ್ಲಿ ವಿವಿಧ ಸಂಘ ಸಂಸ್ಥೆಗಳು, ಮಠದ ವಿದ್ಯಾರ್ಥಿಗಳು, ಗುರುಕುಲ ಸಾಧಕರಿಂದ ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಶ್ರೀಗಳ 44ನೇ ಜನ್ಮವರ್ಧಂತಿ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 6 ಗಂಟೆಯಿಂದ ಶ್ರೀ ಕ್ಷೇತ್ರಧೀಪತಿ ಸಿದ್ದೇಶ್ವರಸ್ವಾಮಿ ಹಾಗೂ ಶ್ರೀಮಠದ ಕರ್ತೃ ಶ್ರೀ ಜಗದ್ಗುರು ರೇಣುಕಾಚಾರ್ಯರು, ಗಣಪತಿ ಮತ್ತು ವೀರಭದ್ರಸ್ವಾಮಿ ಅವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಮಹಾ ಮಂಗಳಾರತಿ ನಡೆಯಿತು. ನಂತರ 11 ಗಂಟೆಗೆ ಗುರುವಂದನಾ ಕಾರ್ಯಕ್ರಮದಲ್ಲಿ ಏಲೆರಾಂಪುರ ಕುಂಚಿಟಿಗೆ ಮಹಾಸಂಸ್ಥಾನ ಮಠದ ಡಾ,ಹನುಮಂತನಾಥಸ್ವಾಮೀಜಿ, ರಾಮಮೂರ್ತಿಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶ್ವರರು, ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ತುಮಕೂರು ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಪಕ್ಷಗಳು ಮುಖಂಡರುಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಶ್ರೀಮಠದ ಭಕ್ತರು ಭಾಗವಹಿಸಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ಪಾದ ಪೂಜೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳಿಂದ ಜನ್ಮವರ್ಧಂತಿ ಆಚರಿಸಿದರು.
ಶ್ರೀಗಳ 44 ನೇ ಜನ್ಮವರ್ಧಂತಿ ಅಂಗವಾಗಿ ಶ್ರೀಮಠಕ್ಕೆ ಬಂದ ಎಲ್ಲಾ ಭಕ್ತರಿಗೂ ಶ್ರೀಮಠದ ವಿದ್ಯಾರ್ಥಿಗಳಿಗೆ ಸಿಹಿ ಊಟದ ವ್ಯವಸ್ಥೆಯೊಂದಿಗೆ, ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು, ಶ್ರೀ ಮಠಕ್ಕೆ ಆಗಮಿಸಿದ ಡಾ.ಹನುಮಂತನಾಥ ಸ್ವಾಮೀಜಿ, ರಾಮಮೂರ್ತಿ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಭಕ್ತರು, ಪತ್ರಕರ್ತರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಶ್ರೀಗಳಿಗೆ ಹುಟ್ಟು ಹಬ್ಬದ ಶುಭಕೋರಿ ಆಶೀರ್ವಾದ ಪಡೆದರು.
ಶ್ರೀಗಳಿಗೆ ಶುಭಕೋರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್: ರಾಜ್ಯದ ಗೃಹ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಶ್ರೀಗಳ 44 ನೇ ಜನ್ಮವರ್ಧಂತಿಗೆ ಶುಭಹಾರೈಸಿ, ಗ್ರಾಮೀಣ ಜನರಿಗೆ ಧಾರ್ಮಿಕವಾಗಿ ಮಾರ್ಗದರ್ಶನ ನೀಡುತ್ತಿರುವ ಶ್ರೀಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC