ಬೀದರ್: ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ.
ಜು.23ರಂದು ಬಾಲಕಿ ಎಂದಿನಂತೆ ಶಾಲೆಗೆ ಹೋಗಿ ಮನೆಗೆ ಮರಳಿದ್ದಳು. ಮಗಳ ಶಾಲಾ ಉಡುಪು ತಾಯಿ ಬದಲಿಸುತ್ತಿರುವ ವೇಳೆ ರಕ್ತಸ್ರಾವವಾಗಿರುವುದು ತಾಯಿಗೆ ಗೊತ್ತಾಗಿದೆ. ಹೀಗಾಗಿ ವೈದ್ಯರ ಬಳಿ ಹೋಗಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಮಹಿಳಾ ಠಾಣೆಗೆ ದೂರು ಕೊಟ್ಟಿದ್ದಾರೆ.
ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC