ಚಿಕ್ಕಮಗಳೂರು: ಮಗ ಪಿಕಪ್ ಸಹಿತವಾಗಿ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆಯಿಂದ ನೊಂದು ಮಗನ ಮೃತದೇಹ ಸಿಗುವುದಕ್ಕೂ ಮೊದಲೇ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದರು.
ಈ ವೇಳೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC