ಲಕ್ನೋ: ಯೂಟ್ಯೂಬ್ ಚಾನೆಲ್ ನಲ್ಲಿ ಅಶ್ಲೀಲ, ನಿಂದನಾತ್ಮಕ ಕಂಟೆಂಟ್ ವಿಡಿಯೋ ಹಂಚಿಕೊಳ್ಳುತ್ತಿದ್ದ ಖ್ಯಾತ ಯೂಟ್ಯೂಬರ್ ವೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಅಮೀರ್ ಎಂಬಾತ ಬಂಧಿತ ಯೂಟ್ಯೂಬರ್ ಆಗಿದ್ದಾನೆ. 5.83 ಮಿಲಿಯನ್ ಚಂದಾದಾರರನ್ನು ಹೊಂದಿರುವ ಈತನ ಯೂಟ್ಯೂಬ್ ಚಾನೆಲ್ ನಲ್ಲಿ ಅಶ್ಲೀಲ, ನಿಂದನೀಯ ಕಂಟೆಂಟ್ ಹಾಗೂ ಹಾದಿತಪ್ಪಿಸುವ ಕಂಟೆಂಟ್ ಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಅಮನ್ ಠಾಕೂರ್ ಎಂಬವರು ಸಮಾಜದ ಸ್ವಾಸ್ತ್ಯ ಕದಡುತ್ತಿರುವ ಯುಟ್ಯೂಬರ್ ಮೊಹಮ್ಮದ್ ಆಮೀರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದರು. ಹಾಗೆಯೇ ಮೊಹಮ್ಮದ್ ಅಮೀರ್ ನ ವಿಡಿಯೋಗಳನ್ನು ಮೊರಾದಾಬಾದ್ ಮತ್ತು ಉತ್ತರ ಪ್ರದೇಶ ಪೊಲೀಸರ ಗಮನಕ್ಕೆ ತಂದಿದ್ದರು.
ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್: ಟಾಪ್ ರಿಯಲ್ ಟೀಮ್ ಎಂಬ ಯುಟ್ಯೂಬ್ ಚಾನೆಲ್ ನಡೆಸುತ್ತಿರುವ ಅಮೀರ್ ಹಾಗೂ ಆತನ ತಂಡ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ವಿಡಿಯೋಗಳನ್ನು ಫೋಸ್ಟ್ ಮಾಡುವ ಮೂಲಕ ವ್ಯಾಪಕ ಟೀಕೆಗಳಿಗೆ ಗುರಿಯಾಗಿದೆ. ಸಂತರು ಮತ್ತು ದೇವತೆಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡುತ್ತಿದ್ದನು. ಈ ಮೂಲಕ ಸಮಾಜದಲ್ಲಿ ದ್ವೇಷ ಹರಡುವ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC