ಮುಂಬೈ: ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಈ ದೋಣಿಯು ಖಾಂಡೇರಿಯಿಂದ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ.
ದುರ್ಘಟನೆ ವೇಳೆ 8 ಮಂದಿ ಮೀನುಗಾರರು ದೋಣಿಯಲ್ಲಿದ್ದರು. ಈ ಪೈಕಿ 5 ಮಂದಿ ಈಜಿ ದಡ ಸೇರಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ. ಕಾಣೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.
ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC