ವರದಿ: ಹಾದನೂರು ಚಂದ್ರ
ಸರಗೂರು: ಕೇರಳದ ವಯನಾಡು, ಕಲ್ಪಿಟ್ಟ ಜಿಲ್ಲೆ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಾರಿ ಮಳೆ ಆಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಭದ್ರತಾ ದೃಷ್ಟಿಯಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ.
ವಯನಾಡ್ ಹಾಗೂ ಕಲ್ಪಿಟ್ಟ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 60 ಮಿ.ಮೀಟರ್‌ಗೂ ಹೆಚ್ಚು ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಇದೆ. ಜತೆಗೆ ಕೇರಳ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದ ಪಾಪನಾಶಿನಿ ಹೊಳೆ ಪಾತ್ರದಿಂದ 30 ಸಾವಿರ ಕ್ಯೂಸೆಕ್ ಗಿಂತ ಹೆಚ್ಚು ನೀರು ಹರಿದುಬರುತ್ತಿದೆ. ಹಾಗಾಗಿ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಇದೆ.
ಈಗಾಗಲೇ ಜಲಾಶಯದ ಮುಂಭಾಗದ ಸೇತುವೆ ಮುಳುಗಡೆ ಆಗಿ ಬೀಚನಹಳ್ಳಿ– ಬಿದರಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಕಡಿತಗೊಂಡು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳು ಸರಗೂರು ಮಾರ್ಗವಾಗಿ ಸಂಚರಿಸಬೇಕಾದ ಪರಿಸ್ಥಿತಿ ಇದೆ.
ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ತಾಲೂಕಿನ ಆಗುತ್ತೂರು ಹಾಗೂ ಕೆ.ಬೆಳ್ಳೂರು ಸೇತುವೆ ಮುಳುಗಡೆ ಆಗಿದೆ. 45 ಸಾವಿರ ಕ್ಯೂಸೆಕ್ ಬಿಟ್ಟರೆ ಹೊಮ್ಮರಗಳ್ಳಿ ಸೇತುವೆ ಮುಳುಗಡೆ ಆಗಲಿದೆ. ಬಹುತೇಕ ಭಾನುವಾರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ. ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟರೆ ನೂರಾರು ಗ್ರಾಮಗಳಿಗೆ ಸಂಪರ್ಕ ರಸ್ತೆ ಕಡಿತಗೊಳ್ಳಲಿದೆ.
2019ರಲ್ಲಿ ಜಲಾಶಯಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದು ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಟ್ಟಿದ್ದರಿಂದ ತಾಲೂಕಿನಲ್ಲಿ ಪ್ರವಾಹ ಉಂಟಾಗಿ ತಾಲೂಕಿನ ದೊಡ್ಡ ತುಂಬಸೋಗೆ ಸೇತುವೆ ಮುಳುಗಡೆ ಆಗಿ ಅನೇಕ
ಕೇರಳದ ವಯನಾಡು ಮತ್ತು ಕಲ್ಪಪೆಟ್ಟಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಜಲಾಶಯದಿಂದ ಯಾವ ಸಂದರ್ಭದಲ್ಲಿ ಬೇಕಾದರೂ ಹೊರ ಹರಿವಿನ ಪ್ರಮಾಣ ಹೆಚ್ಚು ಮಾಡುವುದರಿಂದ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ.
ಗ್ರಾಮಗಳು ಪ್ರವಾಹಕ್ಕೆ ಸಿಲುಕಿ ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಂಡಿದ್ದವು. ಬಿದರಹಳ್ಳಿ ವೃತ್ತದ ಗ್ರಾಮದ ಸುಮಾರು ನಲವತ್ತು ಮನೆಗಳು ನೀರಿನಲ್ಲಿ ಮುಳುಗಡೆ ಯಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾಗಿತ್ತು.
ಅದೇ ರೀತಿ ಕಬಿನಿ ಹಿನ್ನೀರಿನ ಡಿ.ಬಿ. ಕುಪ್ಪೆ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಹಾಡಿಗಳು ನೀರಿನಲ್ಲಿ ಮುಳುಗಿದ್ದವು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ನಿರಾಶ್ರಿತರ ನೆರವಿಗೆ ಬಂದು ಆಶ್ರಯ ಕೇಂದ್ರಗಳನ್ನು ತೆರೆದು ಆಶ್ರಯ ಕಲ್ಪಿಸಿದರು. ಈಗಲೂ ಜನರು ಅದೇ ಆತಂಕದಲ್ಲಿ ಇರುವುದನ್ನು ಕಾಣಬಹುದಾಗಿದೆ.
ಕಬಿನಿ ಜಲಾಶಯಕ್ಕೆ ಇದುವರೆಗೆ ಒಟ್ಟು 60 ಟಿಎಂಸಿ ನೀರು ಹರಿದು ಬಂದಿದ್ದು, 57 ಟಿಎಂಸಿಗೂ ಹೆಚ್ಚು ನೀರನ್ನು ನದಿ ಮೂಲಕ ತಮಿಳುನಾಡಿಗೆ ಹರಿಸಲಾಗಿದೆ. ತಮಿಳುನಾಡು ರಾಜ್ಯಕ್ಕೆ ಒಪ್ಪಂದದಂತೆ ಬಹುತೇಕ ನೀರು ಕಬಿನಿ ಜಲಾಶಯ ಒಂದರಲ್ಲೇ ಬಿಡಲಾಗಿದೆ.
ಈಗಾಗಲೇ ಮಾದಾಪುರ ಚಕ್ಕೂರು ಗ್ರಾಮ ಮಾರ್ಗವಾಗಿ ವಿವಿಧ ಗ್ರಾಮಗಳಿಗೆ ತೆರಳುವ ಸೇತುವೆ ಹಾಗೂ ಅಗತ್ತೂರು ಮಾರ್ಗವಾಗಿ ಬಿದರಹಳ್ಳಿ ಮಾರ್ಗ ಸೇತುವೆ ಮುಳುಗಡೆ ಗೊಂಡಿದೆ ರಿಂದ ಸರಗೂರು ಪೋಲಿಸ್ ಠಾಣೆ ಅಧಿಕಾರಿಗಳು ಮುಂಜಾಗ್ರತೆ ಯಾಗಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ ನದಿಯ ದಡದಲ್ಲಿ ಇರುವ ಸಾರ್ವಜನಿಕರು ಹಾಗೂ ಜಾನುವಾರುಗಳನ್ನು ಬಿಡಬೇಡಿ ಎಂದು ನದಿಯ ದಡದಲ್ಲಿ ಗ್ರಾಮಗಳ ಮುಖಂಡರು ಮಾಹಿತಿಯನ್ನು ನೀಡಲಾಗಿದೆ ಎಂದು ಉಪ ನಿರೀಕ್ಷಕ ಆರ್ ಕಿರಣ್ ತಿಳಿಸಿದರು.
ಇನ್ನೂ ಸರಗೂರು ಪಟ್ಟಣದಿಂದ ಸಾಗರೆ ಗ್ರಾಮ ಮಾರ್ಗವಾಗಿ ಹೋಗುವ ರಸ್ತೆ ಮುಳುಗಡೆವಾಗುವ ಹಂತದಲ್ಲಿ ಇದೆ ಬಸ್ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದರು.
ಎನ್ ಬೇಗೂರು ಗೆಂಡತ್ತೂರು ಕೆಂಚನಹಳ್ಳಿ ಗ್ರಾಮಗಳಿಗೆ ಹೋಗುವ ರಸ್ತೆಗಳು ಮುಳುಗಡೆ ಗೊಂಡಿದರಿಂದ ಅ ಭಾಗದ ಜನರಿಗೆ ಸಂಚಾರ ತೊಂದರೆಯಾಗದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಂದೇಗಾಲ ಮಾರ್ಗವಾಗಿ ಗೆದ್ದೇ ಹುಂಡಿ ಗ್ರಾಮದಿಂದ ನಂದಿನಾಥಪುರ ಮಾರ್ಗವಾಗಿ ಹೋಗುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಉಷಾ, ಕಬಿನಿ ಜಲಾಶಯ ಕಾರ್ಯಪಾಲಕ ಅಭಿಯಂತರರು.
ಕೇರಳದ ವಯನಾಡು ಮತ್ತು ಕಲ್ಪಪೆಟ್ಟಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಜಲಾಶಯದಿಂದ ಯಾವ ಸಂದರ್ಭದಲ್ಲಿ ಬೇಕಾದರೂ ಹೊರ ಹರಿವಿನ ಪ್ರಮಾಣ ಹೆಚ್ಚು ಮಾಡುವುದರಿಂದ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ.
ಗಣೇಶ್, ಎಇಇ ಕಬಿನಿ ಜಲಾಶಯ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC