ತುಮಕೂರು: ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಬೈಕ್ ಸವಾರರೊಬ್ಬರು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವರದಿಗಳ ಪ್ರಕಾರ ಸಪ್ತಗಿರಿ ಬಡಾವಣೆ ನಿವಾಸಿ ಲತೀಶ್ ಎಂಬವರು ಬೈಕ್ ಕಳವಾಗಿರುವ ಬಗ್ಗೆ ದೂರು ನೀಡಿರುವವರಾಗಿದ್ದಾರೆ. ಜು.2ರಂದು ತಾನು ಬೆಳಗ್ಗೆ 11 ಗಂಟೆಗೆ ಎಂದಿನಂತೆ ತುಮಕೂರು ರೈಲ್ವೆ ನಿಲ್ದಾಣದ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ಕೆಲಸಕ್ಕೆ ಹೋಗಿದ್ದೆ, ಸಂಜೆ 7 ಗಂಟೆಯ ವೇಳೆ ಮರಳಿ ಬಂದಾಗ ಬೈಕ್ ನಾಪತ್ತೆಯಾಗಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ರೈಲ್ವೆ ನಿಲ್ದಾಣದ ಬಳಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಹಲವರು ತಮ್ಮ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿಯೇ ನಿಲ್ಲಿಸಿ ಕೆಲಸಕ್ಕೆ ಹೋಗುತ್ತಿದ್ದಾರೆ. ಇದರಿಂದಾಗಿ ಒಂದೆಡೆ ಟ್ರಾಫಿಕ್ ಜಾಮ್ ಸಮಸ್ಯೆಯಾದರೆ, ಇನ್ನೊಂದೆಡೆ ಕಳ್ಳರ ಕಾಟದಿಂದಾಗಿ ವಾಹನಗಳಿಗೂ ಸುರಕ್ಷತೆ ಇಲ್ಲದಂತಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC