ಬೆಂಗಳೂರು: ಡೇಟಿಂಗ್ ಆ್ಯಪ್ ನ ಮೂಲಕ ಪರಿಚಯವಾಗಿದ್ದ ಉದ್ಯೋಗಿಯನ್ನು ಭೇಟಿಗೆ ಆಹ್ವಾನಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ(21), ಅಭಿಷೇಕ್(19), ಶ್ಯಾಮ್ ಸುಂದರ್ ಪಾಂಡೆ(20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಬಂಧಿತರು. ತೆಲಂಗಾಣ ರಾಜ್ಯದ ರಾಕೇಶ್ ರೆಡ್ಡಿ ಅವರು ನೀಡಿದ ದೂರು ಆಧರಿಸಿ ನಗರದ ವಿವಿಧ ಸ್ಥಳಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. 15 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ರಾಕೇಶ್ ರೆಡ್ಡಿ ಅವರು ಮಹದೇವಪುರದಲ್ಲಿ ಇರುವ ಬೋಯಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಂದ ಆರೋಪಿಗಳು ₹2 ಲಕ್ಷ ಸುಲಿಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC