ಕಲಬುರಗಿ: ತಂದೆಯ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತಾಯಿ ದಿವ್ಯಾಂಗರಾಗಿದ್ದು, ಹೀಗಾಗಿ ಬಾಲಕಿಯೇ ತಂದೆಯ ಆರೈಕೆ ಬಂದಿದ್ದಳು. ಆ ಸಂದರ್ಭದಲ್ಲಿ ಆಸ್ಪತ್ರೆಯ ಸ್ವಚ್ಛತಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಯೇ ಕೃತ್ಯ ಎಸಗಿದ್ದಾನೆ.
ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ಸಿಬ್ಬಂದಿ ಸಂಪತ್ ಕಿವಡೇಕರ್ ಎಂಬಾತ ಆಕೆಯನ್ನು ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂಪತ್ ಕಿವಡೇಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC