ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಿಂಡು 68 ವರ್ಷದ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ.
ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ ನಲ್ಲಿ ಈ ಭೀಕರ ಘಟನೆ ವರದಿಯಾಗಿದ್ದು, ಬೀದಿನಾಯಿಗಳ ದಾಳಿಗೆ 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೀತಪ್ಪ ಅವರು ಸೋಮವಾರ ಬೆಳಗ್ಗೆ ವಾಕಿಂಗ್ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು, ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ. ನಾಯಿಗಳ ದಾಳಿಗೆ ವೃದ್ಧ ಸೀನಪ್ಪ ಕೊನೆಯುಸಿರೆಳೆದಿದ್ದಾರೆ.
ಸೋಮವಾರ ಬೆಳಗಿನ ಜಾವ 3 ಗಂಟೆಗೆ ಸೀತಪ್ಪ ಕಂಬಳಿ ಸುತ್ತಿಕೊಂಡು ವಾಕಿಂಗ್ ಮಾಡುತ್ತಿದ್ದರು. ಕಂಬಳಿಯಲ್ಲಿ ಸುತ್ತಿಕೊಂಡು ಓಡಾಡುತ್ತಿದ್ದ ಅವರನ್ನು ನೋಡಿ ಬೀದಿ ನಾಯಿಗಳು ಮುಗಿಬಿದ್ದಿವೆ. ಸೀತಪ್ಪ ಅವರ ಕೈ ಮತ್ತು ಇತರ ಭಾಗಗಳನ್ನು ನಾಯಿಗಳು ಪದೇ ಪದೇ ಕಚ್ಚಿದವು. ಬಳಿಕ ಸ್ಥಳೀಯರು ನಾಯಿಗಳನ್ನು ಓಡಿಸಿ, ಕೂಡಲೇ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಬೀದಿನಾಯಿ ದಾಳಿಯಿಂದ ಮೃತಪಟ್ಟ ವೃದ್ಧ ಸೀತಪ್ಪ ಕುಟುಂಬಸ್ಥರಿಗೆ ಕೇವಲ 1 ಲಕ್ಷ ರೂ. ಪರಿಹಾರ ಕೊಡುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC