ದಿಯೋಘರ್: ಗ್ಯಾಸ್ ಸಿಲಿಂಡರ್ ತುಂಬಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC