ನವದೆಹಲಿ: ಪಿಎಂ- ಕಿಸಾನ್ ಯೋಜನೆಯ 20ನೇ ಕಂತಿನ 20,500 ಕೋಟಿ ರೂ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದರಿಂದ ದೇಶ 9.7 ಕೋಟಿ ರೈತರಿಗೆ ಸಹಾಯವಾಗಲಿದೆ.
2019ರಲ್ಲಿ ಆರಂಭವಾದ ಈ ಯೋಜನೆ ಐದು ವರ್ಷ ಪೂರ್ಣಗೊಳಿಸಿದ್ದು, ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಇಲ್ಲಿಯವರೆಗೆ ಈ ಯೋಜನೆಯಡಿ 19 ಕಂತುಗಳಲ್ಲಿ 3.69 ಲಕ್ಷ ಕೋಟಿ ರೂ ಹಣವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ರೈತರ ಕೃಷಿ ಚಟುವಟಿಕೆಗಳಾದ ಬೀಜ ಖರೀದಿ ಮತ್ತು ರಸಗೊಬ್ಬರದ ಖರ್ಚಿಗೆ ಹಣ ನೆರವಾಗಲಿದೆ.
ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಆಗಸ್ಟ್ 2ರಂದು ಬಿಡುಗಡೆಯಾಗಲಿದ್ದು, 20,500 ಕೋಟಿ ಹಣ ದೇಶದ 9.7 ಕೋಟಿ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC