ಮಂಗಳೂರು: ಧರ್ಮಸ್ಥಳ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸಾಕ್ಷಿಗಳು ಲಭಿಸಿರುವ ಬಗ್ಗೆ ವರದಿಯಾಗಿದೆ.
ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಮಂಗಳವಾರದ ಕಾರ್ಯಾಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಎಸ್ ಐಟಿಯು ಈ ಬೆಳವಣಿಗೆಯ ನಂತರ ತಕ್ಷಣ ಸ್ಥಳದ 10 ಅಡಿ ಆಳದವರೆಗೆ ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ.
ಪತ್ತೆಯಾಗಿರುವ PAN ಕಾರ್ಡ್ ಮತ್ತು ATM ಕಾರ್ಡ್ ಗಳಲ್ಲಿ ಒಂದರ ಮೇಲೆ ಪುರುಷನ ಹೆಸರು ಮತ್ತು ಇನ್ನೊಂದರಲ್ಲಿ ‘ಲಕ್ಷ್ಮಿ’ ಎಂಬ ಹೆಸರಿರುವುದು ಕಂಡುಬಂದಿದೆ. ಈ ಸುಳಿವುಗಳು ವಿಚಾರಣೆಗೆ ಹೊಸ ದಿಕ್ಕು ನೀಡಬಹುದು. ಎಸ್ ಐ ಟಿ ಅಧಿಕಾರಿಗಳು ಈ ಪ್ರಮುಖ ಸುಳಿವಿನ ಬೆನ್ನತ್ತಿ ಹೋಗುತ್ತಾರೆ ಎಂಬ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC