ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಹತ್ಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ.
ಮೂರನೇ ದಿನವಾದ ಇಂದು ನಡೆಯುತ್ತಿರುವ ಉತ್ಖನನ ಕಾರ್ಯಾಚರಣೆಯಲ್ಲಿ 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ದೂರುದಾರ ಗುರುತಿಸಿದ ಸ್ಥಳ ಸಂಖ್ಯೆ 6 ರಲ್ಲಿ ಭಾಗಶಃ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿವೆ ಎಂದು ತಿಳಿದು ಬಂದಿವೆ.
ಎಸ್ ಐಟಿ ದಳ ನೇತ್ರಾವತಿ ನದಿಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಾಕ್ಷಿ–ದೂರುದಾರರ ಸಮ್ಮುಖದಲ್ಲಿ 6ನೇ ಸ್ಥಳದಲ್ಲಿ ಶೋಧ ಕಾರ್ಯವನ್ನು ಪ್ರಾರಂಭಿಸಿತು.
ಎಸ್ ಐಟಿಯು ಧರ್ಮಸ್ಥಳದ ಕಾಡುಪ್ರದೇಶದಲ್ಲಿ ಗುರುತಿಸಲಾದ ಪಾಯಿಂಟ್ ನಂಬರ್ 6 ರಲ್ಲಿ ಹಿಟಾಚಿ ಯಂತ್ರವನ್ನು ಬಳಸಿ ಉತ್ಖನನ ಕಾರ್ಯವನ್ನು ಕೈಗೊಂಡಿತು. ಈ ಸ್ಥಳದಲ್ಲಿ ನಡೆದ ಒಂದೂವರೆ ಗಂಟೆಗಳ ತೀವ್ರ ಶೋಧದ ನಂತರ, ಮೂಳೆ ರೀತಿಯ ವಸ್ತು ಪತ್ತೆಯಾಗಿದೆ.
ನಂತರ ಆ ವಸ್ತುವನ್ನು ಎಚ್ಚರಿಕೆಯಿಂದ ಸಂಗ್ರಹಿಸಿ, ಫಾರೆನ್ಸಿಕ್ ವಿಶ್ಲೇಷಣೆಗಾಗಿ ರವಾನಿಸಲಾಗಿದೆ. ಈ ಕಳೇಬರವು ಮಾನವನದ್ದೇ ಎಂಬುದನ್ನು ಖಚಿತಪಡಿಸಲು ಡಿಎನ್ ಎ ಪರೀಕ್ಷೆ ಸೇರಿದಂತೆ ವೈಜ್ಞಾನಿಕ ವಿಶ್ಲೇಷಣೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


