ಸರಗೂರು: ಲಂಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ 2022–25 ರ ಅವಧಿಯಲ್ಲಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾದೇವ ಹಾಗೂ ಉಪಾಧ್ಯಕ್ಷರಾಗಿ ಪದ್ಮ ಸುರೇಶ್ ಆಯ್ಕೆಗೊಂಡರು.
ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಂಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ನೂತನ ಎಸ್ಡಿಎಂಸಿ ಆಯ್ಕೆ ಪ್ರಕ್ರಿಯೆ ನಡೆಸಿ ನಂತರ ಗ್ರಾಮದ ಹಿರಿಯರ ಪೋಷಕರ ಸಮ್ಮುಖದಲ್ಲಿ ಬುಧವಾರದಂದು ಆಯ್ಕೆ ಮಾಡಲಾಯಿತು ಎಂದು ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ತಿಳಿಸಿದರು.
ಮನುಗನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲಂಕೆ ರಮೇಶ್ ಮಾತನಾಡಿ, ಇಡೀ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶಾಲಾಭಿವೃದ್ಧಿ ಯೋಜನೆಯನ್ನು ತಯಾರಿಸುವುದು, ಶಾಲೆಯ ವಾರ್ಷಿಕ ಚಟುವಟಿಕೆಗಳ ನೀಲನಕ್ಷೆ ರೂಪಿಸುವುದು ಹಾಗೂ ಶೈಕ್ಷಣಿಕ ಯೋಜನೆಯನ್ನು ಸಿದ್ಧಪಡಿಸುವುದು ಮತ್ತು ಅದನ್ನು ಅನುಪಾಲನೆ ಮಾಡುವ ಜವಾಬ್ದಾರಿ ಎಸ್ ಡಿಎಂಸಿ ಮೇಲಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಪೋಷಕರು ಸಾಮಾನ್ಯವಾಗಿ ಬಡವರು, ದಿನವಿಡೀ ದುಡಿಯುವವರು. ಅವರಿಗೆ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಅಧ್ಯಯನ ಮಾಡಿ, ಅದರ ಕಾಯಕಲ್ಪಕ್ಕೆ ಸಲಹೆ ನೀಡಲು ಸಾಧ್ಯವಾಗುವುದು ಕಡಿಮೆ. ಹೀಗಿರುವಾಗ ಒಬ್ಬಿಬ್ಬರು ಆಸಕ್ತಿ ತೋರಿದರೆ ಅದಕ್ಕೆ ವಿರೋಧ ವ್ಯಕ್ತವಾಗಿರುವುದೂ ಉಂಟು ಅದರಿಂದ ಶಿಕ್ಷಕರು ಎಸ್ಡಿಎಂಸಿ ಪದಾಧಿಕಾರಿಗಳು ಜೊತೆಯಲ್ಲಿ ಹೋಗುವುದರಿಂದ ಸಮಸ್ಯೆಗಳು ಬರುವುದು ಕಡಿಮೆಯಾಗುತ್ತದೆ ಎಂದರು.
ನಂತರ ಮಾತನಾಡಿದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮಾದೇವ ಎಲ್ಲಾರೂ ಸಹಕಾರದೊಂದಿಗೆ ಶಾಲಾಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮಾದೇವ, ಉಪಾಧ್ಯಕ್ಷ ಪದ್ಮ ಸುರೇಶ್, ರಮೇಶ್, ನಾಗರಾಜಪ್ಪ, ಪುಟ್ಟು, ಮರಿಲಿಂಗಯ್ಯ, ದಯಾನಂದನ್, ದೇವರಾಜು, ಮಹೇಶ್, ಮೂರ್ತಿ, ನಂದೀಶ್, ಈಶ್ವರ್, ಪರಶಿವ, ಪುಟ್ಟರಾಚಿ, ಪಾಪಣ್ಣ, ಮಾದಪ್ಪ, ಬಿಲ್ಲಯ್ಯ, ಶಾಂಭವಿ, ಚನ್ನಪ್ಪ, ಶಿಕ್ಷಕರಾದ ಶ್ವೇತ, ಜ್ಯೋತಿ, ಶಮೀನ ಇನ್ನೂ ಹಲವು ಮುಖಂಡರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC