ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.
ಈಗಾಗಲೇ ವಿಶೇಷ ನ್ಯಾಯಾಲಯ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿ, ಜು.30ರಂದು ತೀರ್ಪು ಕಾಯ್ದಿರಿಸಿತ್ತು. ಆದರೆ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದ್ದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಕೆಲ ಮಾಹಿತಿ ಕೇಳಿ ಆ.1ಕ್ಕೆ ಮುಂದೂಡಿತ್ತು.
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಶುಕ್ರವಾರ ಹೊರಬೀಳಲಿರುವ ತೀರ್ಪು ಬಹಳ ಮಹತ್ವದ್ದಾಗಿರಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC