nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ. ಪರಮೇಶ್ವರರವರ 74ನೇ ಹುಟ್ಟು ಹಬ್ಬದ ಅಂಗವಾಗಿ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ
    ಕೊರಟಗೆರೆ August 4, 2025

    ಡಾ.ಜಿ. ಪರಮೇಶ್ವರರವರ 74ನೇ ಹುಟ್ಟು ಹಬ್ಬದ ಅಂಗವಾಗಿ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ

    By adminAugust 4, 2025No Comments2 Mins Read
    parameshwara birthday

    ಕೊರಟಗೆರೆ: ನಮ್ಮ ಜನಪ್ರಿಯ ಶಾಸಕರು, ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದರು.

    ಡಾ.ಜಿ.ಪರಮೇಶ್ವರ ರವರ 74ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ  ಇದೇ ಬುಧವಾರ 6ನೇ ತಾರೀಖು ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

    ನಮ್ಮ ನೆಚ್ಚಿನ ಜನಪ್ರಿಯ ಶಾಸಕರಾಗಿರುವ ಡಾ.ಜಿ.ಪರಮೇಶ್ವರ ರವರ ಆದೇಶದಂತೆ ಅವರ ಜನ್ಮ ದಿನದಂದು ಇವರದೇ ಸಿದ್ಧಾರ್ಥ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡಲಾಗಿದೆ, ಇದರ ಸದುಪಯೋಗ ಪಡೆದುಕೊಳ್ಳುವ ಈ ಶಿಬಿರದಲ್ಲಿ ಹಳ್ಳಿ ಜನತೆ ಹೆಚ್ಚು ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಜೊತೆಗೆ ಈ ಶಿಬಿರ ತಪಾಸಣೆಗೆ ಕಡ್ಡಾಯವಾಗಿ ಪಡಿತರ  ಕಾರ್ಡ್, ಆಧಾರ್ ಕಾರ್ಡ್ ತರುವಂತೆ ತಿಳಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ಮಾತನಾಡಿ ಪ್ರತಿಯೊಬ್ಬ ಮನುಷ್ಯನು ಆರೋಗ್ಯವಂತವಾಗಿರಬೇಕು, ಆರೋಗ್ಯವೇ ಭಾಗ್ಯ  ಎಂಬುದು ನಮಗೆಲ್ಲ ತಿಳಿದಿದೆ, ಎಲ್ಲರಿಗೂ ಈ ಶಿಬಿರ ಉಪಯುಕ್ತವಾಗಲಿದ್ದು,  ತಪಾಸಣೆ ನಂತರ ಹೆಚ್ವಿನ ಚಿಕಿತ್ಸೆಗೆ ಸಿದ್ದಾರ್ಥ ವೈದ್ಯಕೀಯ ಸಂಸ್ಥೆಯಿಂದ ಶಸ್ತ್ರ ಚಿಕಿತ್ಸೆ ಉಚಿತವಾಗಿ ಸಿಗಲಿದೆ ಎಂದರು.

    ವಿಶೇಷವಾಗಿ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ ರಕ್ತದಾನ ಮಾಡುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಟಾಧಿಕಾರಿ, ಸಿಇಓ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಕಾಂಗ್ರೆಸ್ ಪಕ್ಷದ ಹೆಚ್ಚಿನ ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೊಳಿಸಬೇಕು ಎಂದರು.

    ಈ ಮಹತ್ವದ ಶಿಬಿರದಲ್ಲಿ ನೂರಿತ ಹೃದ್ರೋಗ ತಜ್ಞರು, ಕಣ್ಣಿನ ರೋಗಗಳ ತಜ್ಞರು, ಸಾಮಾನ್ಯ ರೋಗ, ಸ್ತ್ರೀ ರೋಗಪ್ರಸೂತಿ ಚಿಕಿತ್ಸಾ, ಕೀಲು ಮತ್ತು ಮೂಳೆ ರೋಗ, ಮಕ್ಕಳ ಚಿಕಿತ್ಸಾ, ಕಿವಿಮೂಗುಮತ್ತು ಗಂಟಲು, ಮನೋ ವೈದ್ಯಕೀಯ ಚಿಕಿತ್ಸಾ, ಚರ್ಮಹಾಗೂಗುಹ್ಯ ರೋಗಗಳ, ದಂತ ಚಿಕಿತ್ಸಾಗಳು ಒಂದೇ ಶಿಬಿರದಲ್ಲಿ ದೊರಯಲಿದ್ದು ಈ ಭಾಗದ ಬಡವರು, ರೈತರು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ತಿಳಿಸಲಾಯಿತು.

    ಈ ಪತ್ರಿಕಾಗೋಷ್ಟಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್, ಯುವ ಕಾಂಗ್ರೆಸ್ ಬೈರೇಶ್, ಜಿಲ್ಲಾ ನಿರ್ದೇಶಕಿ ಕವಿತಾ, ಜಿ.ಡಿ ನಾಗಭೂಷಣ್, ಸುನೀಲ್, ಡಿಸಿಸಿ ನಿರ್ದೇಶಕ ಹನುಮಾನ್, ಮೈಲಾರಪ್ಪ, ಗಟ್ಲಹಳ್ಳಿ ಕುಮಾರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಗ್ರಾ.ಪಂ ಅಧ್ಯಕ್ಷೆ ಸೌಮ್ಯ,  ಕವಿತಾ, ಜಯರಾಮ್, ತಾ.ಪಂ ಮಾಜಿ ಅಧ್ಯಕ್ಷ ವೆಂಕಟಪ್ಪ, ಕಾಂಗ್ರೆಸ್ ಮುಖಂಡರಾದ ವಿನಯ್ ಕುಮಾರ್, ರವಿಕುಮಾರ್, ಉಮೇಶ್, ನಂಜುಂಡಯ್ಯ, ಗಂಗರಾಜು, ಜಯರಾಜ್, ಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.