ಬೀದರ್: ಜಿಲ್ಲೆಯ ಔರಾದ ತಾಲೂಕಿನಲ್ಲಿ ಕೊಳ್ಳುರ ಗ್ರಾಮದಲ್ಲಿ ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ರವರ ಅನುದಾನದ 2024– 25 ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಕ್ರೋ ಯೋಜನೆ ಅಡಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಒಳಚರಂಡಿ ನಿರ್ಮಾಣ ಕಾಮಗಾರಿಗಾಗಿ 25 ಲಕ್ಷ ಅನುದಾನ ನೀಡಿದ ಸಲುವಾಗಿ ಲೋಕಸಭಾ ಸದಸ್ಯರಾದ ಸಾಗರ್ ಈಶ್ವರ್ ಖಂಡ್ರೆ ಅವರಿಗೆ ಕೊಳ್ಳುರ ಗ್ರಾಮಸ್ಥರಿಂದ ಅದ್ದೂರಿಯಾಗಿ ಸನ್ಮಾನ ಮಾಡಿ ಅಭಿನಂದಿಸಿದರು.
ಅಭಿನಂದನ ಸಮಾರಂಭ ಉದ್ದೇಶಿಸಿ ಮಾತನಾಡಿದ ಸಾಗರ್ ಖಂಡ್ರೆ, ಔರಾದ ತಾಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯಗಳು ಕಲ್ಪಿಸಿಕೊಡುವುದು ಜನರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಕೆಲಸಗಳಿಗೆ ನಾನು ಸಿದ್ದನಿದ್ದೇನೆ ಎಂದರು.
ತಾಲೂಕಿನ ಅಭಿವೃದ್ಧಿಗೆ ನಾನು ಸದಾ ದುಡಿಯುತ್ತೇನೆ ತಾಲೂಕಿನಲ್ಲಿ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆಹರಿಸಿ ಜನರಿ ಕಷ್ಟಗಳಿಗೆ ಸ್ಪಂದಿಸುತ್ತೇವೆ ಮತ್ತು ಜನರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಕುಂದು ಕೊರತೆಗಳನ್ನು ನಿವಾರಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಸಂಸದರು ಕೆಲಸಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿಕೊಟ್ಟರು ಮತ್ತು ಬೇರೆ ಬೇರೆ ಇಲಾಖೆಗೆ ಸಂಬಂಧಪಟ್ಟ ದೂರುಗಳ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಿ ಅಂತ ಅಧಿಕಾರಿಗಳು ಸೂಚಿಸಿದರು.
ತಹಶೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ಘಾಟೆ, ಸಿಪಿಐ ರಘುವೀರ್ ಸಿಂಗ್ ಠಾಕೂರ್, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಣ್ಣ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ, ಗ್ರಾಮದ ಮುಖಂಡರಾದ ಸುಧಾಕರ್ ಕೊಳ್ಳುರ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ವಿಜಯಕುಮಾರ್ ಡೆಗಲವಾಡೆ, ಸೂರ್ಯಕಾಂತ್ ಮಜ್ಗೆ, ಕಾಶಿನಾಥ ದಬಾದೆ , ಬಾಬು ರಾವ್ ಪಾಟೀಲ,ಅಶೋಕ್ ಚಂದ, ವಿಜಯಕುಮಾರ್, ಮಲ್ಲಿಕಾರ್ಜುನ್ ಪಾಟಿಲ್, ಶರಣಪ್ಪ ಪಾಟೀಲ್, ಅನಿಲ್ ನಿರ್ಮಳ,ಮುಂತಾದರೂ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


