nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್ | ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ: ಸಚಿವ ಈಶ್ವರ್ ಖಂಡ್ರೆ
    ಜಿಲ್ಲಾ ಸುದ್ದಿ August 7, 2025

    ಬೀದರ್ | ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ: ಸಚಿವ ಈಶ್ವರ್ ಖಂಡ್ರೆ

    By adminAugust 7, 2025No Comments2 Mins Read

    ಬೀದರ್ : ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

    ನಗರದ ಮೈಲೂರು ರಸ್ತೆಯಲ್ಲಿರುವ ಜಿ.ಎನ್.ಡಿ ಕಾಲೇಜು ಕ್ಯಾಂಪಸ್‌ ನ ಗುರುನಾನಕ ಭವನ ಅವರಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದರ ಜೊತೆಗೆ ಈ ಅಂಗಗಳ ನ್ಯೂನ್ಯತೆಯನ್ನು ಎತ್ತಿ ಹಿಡಿಯುವ, ಪ್ರಗತಿದಾಯಕ ಕಾರ್ಯ ಮಾಡಿದರೆ ಅವನ್ನು ಪ್ರಶಂಸಿಸುವ ಕಾರ್ಯ ಮಾಧ್ಯಮಗಳು ಮಾಡುತ್ತವೆ. ಲೇಖನಿ ಖಡ್ಗಕ್ಕಿಂತ ಹರಿತವಾದದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸುದ್ದಿಯಲ್ಲಿ ನಿಖರತೆ ಇರುವುದು ಮುಖ್ಯವಾಗಿದೆ ಎಂದು ಹೇಳಿದರು.

    ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ. ಇತ್ತೀಚಿಗೆ ಎಲ್ಲಾ ಕ್ಷೇತ್ರಗಳು ಕಲುಷಿತಗೊಂಡಿದೆ. ಅದೇ ರೀತಿ ಮಾಧ್ಯಮ ಕ್ಷೇತ್ರ ಕೂಡ ಹಾದಿ ತಪ್ಪುತ್ತಿರುವುದು ನಾವು ನೋಡುತ್ತಿದ್ದೇವೆ. ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರ ದೌರ್ಜನ್ಯ, ಗುಂಪು ಹತ್ಯೆದಂತಹ ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ, ನಿಖರತೆಯಿಂದ ಸುದ್ದಿ ಮಾಡುವ ಮಾಧ್ಯಮದವರಿಗೆ ಧನ್ಯವಾದಗಳು ಎಂದು ತಿಳಿಸಿದರು

    ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪತ್ರಕರ್ತರು ನಿಜವಾದ ಸುದ್ದಿಗಳನ್ನು ನೀಡುತ್ತಾರೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿರುತ್ತಾರೆ. ಗ್ರಾಮೀಣ ಪತ್ರಕರ್ತರಿಗೆ ಇನ್ನು ಸ್ವಲ್ಪ ಬಲ ಕೊಡಬೇಕಾಗಿದೆ ಎಂದು ಹೇಳಿದರು.

    ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಯಾವ ಸಿದ್ಧಾಂತಗಳ ಮೇಲೆ ಮಾಧ್ಯಮ ನಡೆಯಬೇಕು ಎನ್ನುವುದು ನಾವು ತಿಳಿದುಕೊಳ್ಳಬೇಕಾಗಿದೆ. ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಅದರ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಸುದ್ದಿಗಳು ನಿಷ್ಪಕ್ಷಪಾತವಾಗಿರಬೇಕು. ಹಾಗೆಯೇ ಒಂದು ಪತ್ರಿಕೆಯಲ್ಲಿ ಸ್ಥಳೀಯ ಸುದ್ದಿಗಳಿಂದ ರಾಷ್ಟ್ರ, ಅಂತಾರಾಷ್ಟ್ರೀಯ, ವೈಜ್ಞಾನಿಕ ಹಾಗೂ ಇನ್ನು ಹಲವಾರು ಸುದ್ದಿಗಳು ಒಳಗೊಂಡಿರಬೇಕು. ಆವಾಗ ಮಾತ್ರ ಓದುಗರಿಗೆ ಎಲ್ಲ ವಿಷಯಗಳ ಬಗ್ಗೆ ಅರಿವಾಗುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಗುರುದ್ವಾರದ ಪ್ರಬಂಧಕ ಸಮಿತಿ ಅಧ್ಯಕ್ಷ ಡಾ.ಸರ್ದಾರ್ ಬಲಬೀರ್ ಸಿಂಗ್, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ, ಸದಸ್ಯರಾದ ರಶ್ಮಿ, ಅಬ್ಬಾಸ್ ಮುಲ್ಲಾ, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಹಾಗೂ ಬೀದರನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ ಸೇರಿದಂತೆ ಕಲ್ಯಾಣ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಸುಮಾರು 200ಕ್ಕೂ ಅಧಿಕ ಪತ್ರಕರ್ತರು ತರಬೇತಿಯಲ್ಲಿ ಭಾಗವಹಿಸಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.