ಮಯೂರ್ಭಂಜ್: ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ 11 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಒಂದು ತಿಂಗಳಿಗೂ ಹೆಚ್ಚು ಕಾಲ ಪದೇ ಪದೇ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಈ ಸಂಬಂಧ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಜೂನ್ 14 ಮತ್ತು ಜುಲೈ 27 ರ ನಡುವೆ ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಆಗಸ್ಟ್ 3 ರಂದು ಖುಂಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಂಡ ಪೊಲೀಸರು ಬುಧವಾರ ಸಂತ್ರಸ್ತೆಯ ಭಾವ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಅಪ್ರಾಪ್ತ ವಯಸ್ಕ ಆರೋಪಿಯನ್ನು ರೂರ್ಕೆಲಾದ ಮಕ್ಕಳ ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದ್ದರೆ, ಉಳಿದ ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆಸ್ಪತ್ರೆಯಲ್ಲಿ ಬಾಲಕಿ ಮತ್ತು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹುಡುಗಿಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC