ರಾಯಚೂರು: ಅಂಗನವಾಡಿ ಕೇಂದ್ರದ ಛಾವಣಿ ಮೇಲ್ಪದರ ಕುಸಿದು ಅಂಗನವಾಡಿ ಶಿಕ್ಷಕಿ ಗಂಭೀರವಾಗಿ ಗಾಯಗೊಂಡ ಘಟನೆ ಅರಕೇರಾ ತಾಲೂಕಿನ ಆಲ್ದರ್ತಿ ಗ್ರಾಮದಲ್ಲಿ ನಡೆದಿದೆ.
ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗನವಾಡಿ ಶಿಕ್ಷಕಿ ಮೇಲೆಯೇ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದ್ದು, ಅಂಗನವಾಡಿ ಶಿಕ್ಷಕಿ ಮಹಾದೇವಮ್ಮಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ, ಬೆನ್ನಿಗೆ ತೀವ್ರ ಪೆಟ್ಟುಗಳಾಗಿ ಶಿಕ್ಷಕಿ ಕುಸಿದು ಬಿದ್ದಿದ್ದಾರೆ.
ಛಾವಣಿ ಮೇಲ್ಪದರ ಬಿದ್ದ ರಭಸಕ್ಕೆ ಶಿಕ್ಷಕಿ ಕುಳಿತಿದ್ದ ಕುರ್ಚಿ ಮುರಿದುಹೋಗಿದೆ. ಕೂಡಲೇ ಸಹಾಯಕ್ಕೆ ಬಂದ ಗ್ರಾಮಸ್ಥರು ಗಾಯಗೊಂಡ ಶಿಕ್ಷಕಿಯನ್ನ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC