ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯಿಂದ ಕೆ.ಎನ್. ರಾಜಣ್ಣ ಹೆಸರು ಕೈಬಿಡಲಾಗಿದೆ
ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಯ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುತ್ತಾರೆ. ಬಳ್ಳಾರಿ ಉಸ್ತುವಾರಿಯಾಗಿದ್ದ ಸಚಿವ ನಾಗೇಂದ್ರ ಅವರ ಅನುಪಸ್ಥಿತಿಯಲ್ಲಿ ಈ ಬಾರಿ ಯಾವ ಜಿಲ್ಲೆಯಲ್ಲಿ ಯಾವ ಸಚಿವರು ಧ್ವಜಾರೋಹಣ ಮಾಡುತ್ತಾರೆ ಎಂಬ ಪಟ್ಟಿಯನ್ನು ಒಳಗೊಂಡ ಆದೇಶವನ್ನು ಎರಡು ವಾರದ ಹಿಂದೆ ರಾಜ್ಯ ಸರ್ಕಾರ ಪ್ರಕಟ ಮಾಡಿತ್ತು. ಅದರಲ್ಲಿ ರಾಜಣ್ಣ ಅವರರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ್ದರಿಂದ ಆ ಜಿಲ್ಲೆಯ ಕಾರ್ಯಕ್ರಮದ ಧ್ವಜಾರೋಹಕ್ಕೆ ನಿಗದಿ ಮಾಡಲಾಗಿತ್ತು.
ಆದರೆ, ಗುರುವಾರ ಹೊಸ ಆದೇಶ ಹೊರಬಿದ್ದಿದ್ದು, ರಾಜಣ್ಣ ಹೆಸರು ಕೈಬಿಡಲಾಗಿದೆ. ಸೋಮವಾರ ಪ್ರಕಟವಾದ ಆದೇಶದ ಪ್ರಕಾರ, ಹಾಸನದಲ್ಲಿ ಕೃಷ್ಣಬೈರೇಗೌಡ ಧ್ವಜಾರೋಹಣ ಮಾಡಲಿದ್ದಾರೆ. ಬಳ್ಳಾರಿಯಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ ಮಾಡಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


