ಬೀದರ್: ಡಾ.ಅಂಬೇಡ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಯುವಕನೊರ್ವನ ಮೇಲೆ ಶನಿವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಹುಮ್ನಾಬಾದ್ ತಾಲೂಕಿನ ಕುಮಾರ ಚಿಂಚೋಳಿ ಗ್ರಾಮದ ನಿವಾಸಿ ರಾಜಕುಮಾರ್ ರಂಜೇರಿ ಎನ್ನುವ ಯುವಕ ಶಿವು ಎಂಬ ವ್ಯಕ್ತಿಗೆ ಜಾತಿನಿಂದನೆ ಮತ್ತು ಆತನ ಕುಟುಂಬಸ್ಥರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಹಾಗೆಯೇ ಶಿವು ಎಂಬಾತ ದಲಿತ ಕುಟುಂಬಕ್ಕೆ ಸೇರಿದ್ದರಿಂದ ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರ ವಿರುದ್ದ ಮುಕೇಶ್ ಪಾಂಡೆ ಎನ್ನುವವರು ದೂರು ನೀಡಿದ್ದು, ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೆ ಅವಮಾನ ಮಾಡಿರುವ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC