ಬೆಂಗಳೂರು: ಕೆ.ಎನ್.ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ ಎಂದರು.
ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ ಎಂದು ಅವರು ಹೇಳಿದರು.
ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ನನಗೆ ಗೊತ್ತಿಲ್ಲ. ಏನೂ ಮಾಡಲು ಆಗುವುದಿಲ್ಲ. ಇದು ಪಕ್ಷದ ತೀರ್ಮಾನ ಎಂದರು. ರಾಜೀನಾಮೆ ತೆಗೆದುಕೊಳ್ಳಬಹುದಿತ್ತು, ಆದರೆ ವಜಾ ಮಾಡಿದ್ದು ಅವಮಾನ ಮಾಡಿದಂತೆ ಅಲ್ಲವೇ ಎಂದಾಗ, “ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಪುನರುಚ್ಚರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC