ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಸಂಬಂಧ ಮಧುಗಿರಿಯಲ್ಲಿ ರಾಜಣ್ಣ ಬೆಂಬಲಿಗರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.
ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆಯಿತು. ಮಧುಗಿರಿಯಲ್ಲಿ ಕಾಂಗ್ರೆಸ್ ಮುಖಂಡರು ಇಂದು ಬಂದ್ ಗೆ ಕರೆ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಸ್ವಯಂಪ್ರೇರಿತ ಬಂದ್ ಆಚರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ರಾಜಣ್ಣ ಅವರನ್ನ ವಜಾ ಮಾಡಿರುವುದು ತುಮಕೂರಿಗೆ ನಷ್ಟ ಅಂತ ರಾಜಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಧುಗಿರಿಯ ಎಲ್ಲಾ ಅಂಗಡಿ, ಮುಂಗಟ್ಟು ಬಂದ್ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಮಧುಗಿರಿಯಲ್ಲಿ ರಾಜಣ್ಣ ಪರ ಪ್ರತಿಭಟನೆ ಜೋರಾಗಿದೆ ಬೆಂಬಲಿಗರು ಬಸ್ ತಡೆಯುವ ಮೂಲಕ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದು, ರಾಜಣ್ಣ ಅವರ ಫೋಟೊ ಹಿಡಿದು ಬಸ್ ಕೆಳಗೆ ಮಲಗಿ ಹೈಡ್ರಾಮ ಸೃಷ್ಟಿಸಿದ್ದಾರೆ.
ರಾಜ್ಯ ಸರ್ಕಾರ ಬಂದ್ ನಡೆಸಲು ಅವಕಾಶ ನೀಡುತ್ತಾ? ರಾಜಕೀಯ ಏರಿಳಿತದ ಕಾರಣಕ್ಕೆ ಸಾರ್ವಜನಿಕರು ಬಂದ್ ನಿಂದ ಅನಗತ್ಯವಾಗಿ ತೊಂದರೆಗೀಡಾಗಬೇಕೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC