ಕೊರಟಗೆರೆ: ರಾಜ್ಯದ ಬಹುತೇಕ ಕಡೆಗಳಲ್ಲಿ ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ, ಈ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಶಿಕ್ಷಕರು ಗ್ರಾಮಗಳಲ್ಲಿ ಮನೆ –ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಬನ್ನಿ ಎಂದು ಬೇಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ವಿಷಾದನೀಯ ಎಂದು ಎಲೆರಾಂಪುರ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಅವರು ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸಮುದಾಯ ಭವನದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ತಾಲೂಕಿನ ೪೪ ಪ್ರೌಢಶಾಲೆಗಳ ಎಸ್.ಎಸ್.ಎಲ್.ಸಿ ಮತ್ತು ೧೧ ಪಿಯು ಕಾಲೇಜುಗಳ ೨೦೨೪–೨೫ ನೇ ಸಾಲಿನ ಪರೀಕ್ಷೇಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ತಮ್ಮ ಕರ್ತವ್ಯ ಮುಗಿಯಿತು ಎಂದು ಕೊಂಡಿದ್ದಾರೆ ಇದು ಸರಿಯಲ್ಲ ಇಂದು ಮಕ್ಕಳು ಕೇವಲ ೧೦ ನೇ ತರಗತಿಯ ವರೆಗೆ ಪೋಷಕರ ಮತ್ತು ಶಿಕ್ಷರ ಹಿಡಿತದಲ್ಲಿ ಮಕ್ಕಳು ಇರುತ್ತಾರೆ ನಂತರ ಅವರ ದಿಕ್ಕು ಬದಲಾಗುತ್ತದೆ, ಇಲ್ಲಿ ಮಕ್ಕಳನನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕಿದೆ ಹಾಗೂ ಸರ್ಕಾರಿ ಶಾಲೆಯ ಮಕ್ಕಳಿಗೆ ಎಲ್ಲಾ ತರದ ಸವಲತ್ತುಗಳು ನೀಡುತ್ತಿದ್ದು ಶಿಕ್ಷಕರನ್ನು ಬೋದನೆ ಮಾಡೆಲು ಬಿಡದೆ ಅನೇಕ ಕೆಲಸಗಳನ್ನು ವಹಿಸುತ್ತದೆ ಇದು ತಪ್ಪಬೇಕು ಶಿಕ್ಷಕರಿಗೆ ಕೆವಲ ಶಿಕ್ಷಣ ಬೋದನೆಗೆ ಮಾತ್ರ ಸೀಮಿತಗೊಳ್ಳುವಂತೆ ಮಾಡಬೇಕು ಎಂದರು.
ಗೊರವನಹಳ್ಳಿ ಶ್ರೀ ಮಾಹಾಲಕ್ಷ್ಮಿ ಕ್ಷೇತ್ರವು ಧಾರ್ಮಿಕ, ಶೈಕ್ಷಣಿಕ ಮತ್ತು ಆದ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿದೆ ವಿಶೇಷವಾಗಿ ಶೈಕ್ಷಣಿಕವಾಗಿ ಶ್ರೀ ಕ್ಷೇತ್ರದಲ್ಲಿ ನಡೆಸುತ್ತಿರುವಂತೆ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ, ಈ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಶ್ರೀಗಳು ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳುವ ಹಾಗೂ ನಮ್ಮ ಭಾರತೀಯ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳನ್ನು ಹಾಗೂ ವಿದ್ಯೆ ಕಲಿಸಿದ ಗುರುಗಳನ್ನು ಪೂಜ್ಯ ಭಾವದಿಂದ ನೋಡುವ ಸಂಸ್ಕಾರ ಕಲಿಸಬೇಕು ಎಂದು ತಿಳಿಸಿದರು.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಮಾಧವರೆಡ್ಡಿ ಮಾತನಾಡಿ, ಪ್ರತಿಯೊಬ್ಬರಿಗೂ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸುವ ಸಾಮರ್ಥೈ ಇರುತ್ತದೆ ಅದರೆ ಎಲ್ಲರೂ ಅಂಕ ಗಳಿಸುವುದಿಲ್ಲ ೧೦ನೇ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆದು ಪ್ರತಿಭಾ ಪುರಸ್ಕಾರ ಪಡೆದರೆ ಸಾಲದು ಇದು ನಿಮ್ಮ ಮುಂದಿನ ಭವಿಷ್ಯ ವಿದ್ಯಾಬ್ಯಾಸಕ್ಕೆ ಎಚ್ಚರಿಕೆಯ ಗಂಟೆ ಪಿಯು ಮತ್ತು ಪದವಿ ಪದವಿ ತಗತಿಳಲ್ಲಿ ಇನ್ನು ಹೆಚ್ಚಿನ ಅಂಕಪಡೆಯುವ ಮನೋಭಾವ ನಿಮ್ಮಲ್ಲಿ ಮೂಡಬೇಕು ಜವಾಬ್ದಾರಿಯಿಂದ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದ ಅವರು ವಿದ್ಯಾರ್ಥಿಗಳು ಸಂಪತ್ತಿಗಿಂತ ಜ್ಞಾನಕ್ಕೆ ಆದ್ಯತೆ ನೀಡಿ ಸಾಧಕರ ಸಾಲಿನಲಿ ನಿಲ್ಲಬೇಕು ಎಂದು ಸಲಹೆ ನೀಡಿದರು.
ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಾಸುದೇವ್ ಮಾತನಾಡಿ, ನಮ್ಮ ಟ್ರಸ್ಟ್ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಕಳೆದ ೨೫ ವರ್ಷಗಳಿಂದ ಸಾಮಾಜಿಕ ಕಳಕಳಿಯಿಂದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳಲ್ಲಿ ತೊಡಗಲಿದೆ ಎಂದ ಅವರು ತಾಲೂಕಿನ ೪೪ ಪ್ರೌಢ ಶಾಲೆಗಳಲ್ಲಿ ಮತ್ತು ೧೧ ಪಿಯು ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಅಬಿನಂದಿಸಲಾಗುತ್ತಿದ ಎಂದರು.
ಕಾರ್ಯಕ್ರಮದಲ್ಲಿ ಮಹಾಲಕ್ಷ್ಮೀ ಶಾಲೆಯ ಮುಖ್ಯ ಶಿಕ್ಷಕ ಸೋಮಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರೆ, ವೇದಿಕೆಯಲ್ಲಿ ಉಪನ್ಯಾಸಕ ಮುದ್ದುವೀರಪ್ಪ, ಟ್ರಸ್ಟ್ ನ ಕಾರ್ಯದರ್ಶಿ ಮುರಳೀಕೃಷ್ಣ, ಖಜಾಂಚಿ ಜಗದೀಶ್, ಧರ್ಮದರ್ಶಿಗಳಾದ ಶ್ರೀಪ್ರಸಾದ್, ರವಿರಾಜ್ ಅರಸ್, ಚಿಕ್ಕನರಸಪ್ಪ, ನರಸರಾಜು, ಡಾ.ಲಕ್ಷ್ಮಿಕಾಂತ್, ಎನ್.ಜಿ.ನಾಗರಾಜು, ಓಂಕಾರೇಶ್ವರ್, ಮಂಜುನಾಥ್, ಬಾಲಕೃಷ್ಣ, ಟ್ರಸ್ಟ್ ನ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ವಿಶೇಷಾಧಿಕಾರಿ ಕೇಶವಮೂರ್ತಿ, ಶಿಕ್ಷಣ ಇಲಾಖೆಯ ಬಿ.ಆರ್.ಸಿ.ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC