ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಪಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


