ವೈ.ಎನ್.ಹೊಸಕೋಟೆ: ವೈ.ಎನ್.ಹೊಸಕೋಟೆಯ RVP ಪ್ರೌಢಶಾಲೆಯಲ್ಲಿ ಮಧುಶ್ರೀನಿವಾಸನ್ ರವರ ಮಾರ್ಗದರ್ಶನದಲ್ಲಿ ರೂಪುಗೊಂಡ ಗಣಿತ –ವಿಜ್ಞಾನ ಪ್ರಯೋಗಶಾಲೆಯನ್ನು ಸಂಸ್ಥೆಯ ಕಾರ್ಯದರ್ಶಿ ಎನ್.ಆರ್. ಅಶ್ವಥ್ ಕುಮಾರ್ ಉದ್ಘಾಟಿಸಿದರು.
ನಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು. ಮುಖ್ಯ ಶಿಕ್ಷಕರಾದ ಬಿ.ತಿಪ್ಪೇಸ್ವಾಮಿ ಒಂದು ಸರಳ ಪ್ರಯೋಗದ ಪ್ರಾತ್ಯಕ್ಷಿಕೆಯನ್ನು ಮಾಡಿದರು. ಮಧುಶ್ರೀನಿವಾಸನ್ ರವರು ಪ್ರಯೋಗಾಲಯದಲ್ಲಿರುವ ಗಣಿತ ಹಾಗೂ ವಿಜ್ಞಾನದ ಮಾದರಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರುಗಳಾದ ಅನಿಲ್ ಕುಮಾರ್, ವಿನೋದ್ ಕುಮಾರ್, ಶಿವಣ್ಣ, ಅನ್ನಪೂರ್ಣ ಉಪಸ್ಥಿತರಿದ್ದರು. ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC