ಸರಗೂರು: ಇತಿಹಾಸದಲ್ಲಿ ಅಪರೂಪವಾಗಿ ಬರುವ ಇಂಥ ಈ ಗಳಿಗೆಯಲ್ಲಿ ಹಳತಿನಿಂದ ಹೊಸತಿಗೆ ಕಾಲಿಡುತ್ತಿದ್ದೇವೆ. ಹಳೆಯ ಯುಗ ಮುಗಿದು ಬಹುಕಾಲ ಅದುಮಿಟ್ಟ ದೇಶವೊಂದರ ಚೇತನವು ತನ್ನ ಅಭಿವ್ಯಕ್ತಿಯನ್ನು ಕಂಡುಕೊಳ್ಳುತ್ತಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜ ಅನಾವರಣಗೊಳಿಸಿ ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇವತ್ತು ನಾವು ನಮ್ಮ ದುರಾದೃಷ್ಟದ ಕಾಲವನ್ನು ಮುಗಿಸುತ್ತಿದ್ದೇವೆ ಮತ್ತು ಭಾರತವು ತನ್ನನ್ನು ತಾನು ಮತ್ತೆ ಕಂಡುಕೊಳ್ಳುತ್ತಿದೆ. ಸ್ವಾತಂತ್ರ್ಯವು ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನವನ್ನು ತನಗೆ ಇಷ್ಟವಾದ ರೀತಿಯಲ್ಲಿ ನಡೆಸಲು, ತನ್ನ ಆಲೋಚನೆಗಳನ್ನು ವ್ಯಕ್ತಪಡಿಸಲು ಮತ್ತು ತನ್ನ ಆಯ್ಕೆಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಇದು ವ್ಯಕ್ತಿಯ ಆತ್ಮಗೌರವ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುತ್ತದೆ ಎಂದರು.
ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಮಾತನಾಡಿ, 200 ವರ್ಷಗಳ ಬ್ರಿಟಿಷ್ ಆಳ್ವಿಕೆಯ ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ನಾಯಕರು ಪ್ರಮುಖ ಪಾತ್ರ ವಹಿಸಿದರು, ಅವರಲ್ಲಿ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಮುಂತಾದವರು ಪ್ರಮುಖರು. ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದರು. ಸ್ವಾತಂತ್ರ್ಯ ದಿನಾಚರಣೆಯು ಭಾರತೀಯರ ಸ್ವಾಭಿಮಾನ ಮತ್ತು ದೇಶಭಕ್ತಿಯ ಸಂಕೇತವಾಗಿದೆ ಎಂದು ತಿಳಿಸಿದರು.


ಮುಖ್ಯ ಭಾಷಣಕಾರರಾಗಿ ಹಳಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ರಂಗನಾಥ ಮಾತನಾಡಿ ಭಾರತವು ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯುವವರೆಗೆ ನಾಗರಿಕ ಅಸಹಕಾರಕ್ಕೆ ತಮ್ಮನ್ನು ತಾವು ಪ್ರತಿಜ್ಞೆ ಮಾಡಲು ಮತ್ತು ಕಾಲಕಾಲಕ್ಕೆ ನೀಡಿದ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸಿಕೊಂಡು ಬಂದಿದೆ. ಅಂತಹ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ನಾಗರಿಕರಲ್ಲಿ ರಾಷ್ಟ್ರೀಯತೆಯ ಉತ್ಸಾಹವನ್ನು ಹುಟ್ಟುಹಾಕಲು ಮತ್ತು ಸ್ವಾತಂತ್ರ್ಯವನ್ನು ನೀಡುವುದನ್ನು ಪರಿಗಣಿಸಲು ಬ್ರಿಟಿಷ್ ಸರ್ಕಾರವನ್ನು ಒತ್ತಾಯಿಸಲು ಕಲ್ಪಿಸಲಾಗಿತ್ತು.ಅಲ್ಲಿ ಹಾಜರಾದವರು ಸ್ವಾತಂತ್ರ್ಯದ ಪ್ರತಿಜ್ಞೆಯನ್ನು” ತೆಗೆದುಕೊಂಡರು 1947 ರಲ್ಲಿ ನಿಜವಾದ ಸ್ವಾತಂತ್ರ್ಯದ ನಂತರ, ಭಾರತದ ಸಂವಿಧಾನವು 26 ಜನವರಿ 1950 ರಿಂದ ಜಾರಿಗೆ ಬಂದಿತು; ಅಂದಿನಿಂದ ಜನವರಿ 26 ಅನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮ ಉದ್ದೇಶಿಸಿ ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಶ್ರೀನಿವಾಸ ಮಾತನಾಡಿದರು.
ಈ ಸಂದರ್ಭದಲ್ಲಿ , ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು , ಚೆಲುವ ಕೃಷ್ಣ, ಉಮಾ ರಾಮಚಂದ್ರ, ನೂರಳಾಸ್ವಾಮಿ, ಚೈತ್ರ ಸ್ವಾಮಿ, ದಿವ್ಯ ನವೀನ್, ಹೇಮಾವತಿ ರಮೇಶ್, ವಿನಾಯಕ ಪ್ರಸಾದ್, ಸಣ್ಣ ತಾಯಮ್ಮ, ಚಂದ್ರಕಲಾ ರಾಜಣ್ಣ, ಮುಖಂಡರು ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ದಸಂಸ ಮುಖಂಡ ಇಟ್ನ ರಾಜಣ್ಣ, ರೈತ ಕಲ್ಯಾಣ ಸಂಘದ ಯುವ ರಾಜ್ಯಾಧ್ಯಕ್ಷ ಎಸ್ ಬಿ ಸಮಂತ್, ರೈತ ಸಂಘದ ತಾಲೂಕು ಅಧ್ಯಕ್ಷ ಚನ್ನಾಯಕ, ತಾಪಂ ಇಓ ಪ್ರೇಮ್ ಕುಮಾರ್,ಪಪಂ ಮುಖ್ಯಾಧಿಕಾರಿ ಎಸ್ ಕೆ ಸಂತೋಷ ಕುಮಾರ್, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಉಪ ನಿರೀಕ್ಷಕ ಆರ್ ಕಿರಣ್, ಗೋಪಾಲ್, ವಲಯ ಅರಣ್ಯಾಧಿಕಾರಿ ಅಕ್ಷಯ್ ಕುಮಾರ್, ಕೆಇಬಿ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಎಸ್, ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಉಪತಹಶೀಲ್ದಾರ್ ಸುನೀಲ್, ಮಹದೇವಮೂರ್ತಿ, ರವಿಂದ್ರ, ರವಿಚಂದ್ರನ್, ಮುಜೀಬ್, ಮನೋಹರ್, ಗ್ರಾಮಲ್ಕೇಗರು ಕುಮಾರ್, ಪುರುಷೋತ್ತಮ್, ಸತ್ಯನಾರಾಯಣ, ನಾಗಪ್ಪ, ಚಂದ್ರಶೇಖರ, ಸರ್ವೆ ನಾಗರಾಜು,ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


