ಬೀದರ್: ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡಲೆಂದೇ ಹುಟ್ಟಿ, ಭಾರತ ದೇಶವೇ ತಮ್ಮ ಕುಟುಂಬವೆಂದು ಭಾವಿಸಿ, ತಮ್ಮ ಕುಟುಂಬವನ್ನು ತೊರೆದು ಸ್ವಾತಂತ್ರ್ಯವನ್ನು ದೊರಕಿಸಿ, ತಮ್ಮ ಪ್ರಾಣವನ್ನೆ ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರನ್ನು 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಸ್ಮರಿಸೋಣ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು.
ಬೀದರ್ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾದ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ಸಮಸ್ತ ಸ್ವಾತಂತ್ರ ಹೋರಾಟಗಾರರಿಗೆ ಈ ಸಂದರ್ಭದಲ್ಲಿ ನೆನೆಯುತ್ತಾ, ಅವರ ಈ ಬಲಿದಾನವನ್ನು ನಮಿಸೋಣ ಎಂದರು.
ಧ್ವಜಾರೋಹಣ ಮಾಡಿ ನೆರವೇರಿಸಿದ ಬಳಿಕ ಬೀದರ ಜಿಲ್ಲೆಯ ನಾಗರಿಕರಿಗೆ, ಪೊಲೀಸ್ ಅಧಿಕಾರಿ,ಸಿಬ್ಬಂದಿ, ಲಿಪಿಕ ಅಧಿಕಾರಿ ಸಿಬ್ಬಂದಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


