ಬೀದರ್: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಕ್ರವಾರ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪರಿಸರ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು.
ಮೈದಾನದಲ್ಲಿ ತೆರದ ಜೀಪಿನಲ್ಲಿ ಸಂಚರಿಸಿದ ಸಚಿವರು, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು ಜಿಲ್ಲಾ ಸಶಸ್ತ್ರ ಮೀಸಲು ಪೋಲಿಸ್ ಪಡೆ ಸೇರಿ ವಿವಿಧ ಶಾಲಾ ಹಾಗೂ ಕಾಲೇಜಿನ ತುಕಡಿಗಳು ಆಕರ್ಷಕ ಪಥ ಸಂಚಲನ ಗಮನ ಸೆಳೆಯಿತು. ಬಳಿಕ ಶಾಲಾ — ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ಆಶೀಷ ರೆಡ್ಡಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮತ್ತಿತರರು ಹಾಜರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC