ಸರಗೂರು: ವಿದ್ಯಾಭ್ಯಾಸ ಮುಗಿಸಿ ನಂತರವೂ ವಿದ್ಯಾರ್ಥಿಗಳು ತಾವು ಓದಿದ ಪ್ರಥಮ ದರ್ಜೆ ಕಾಲೇಜು ಗುರುಗಳನ್ನು ನೆನಪಿನಲ್ಲಿ ಇಟ್ಟಿಕೊಂಡಿದ್ದಾರೆ ಎಂದರೆ ಇದು ಮಾದರಿ ಕಾರ್ಯ ಎಂದು ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಜೆ.ಪುಟ್ಟರಾಜು ಎಂದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜು ಎಚ್.ಡಿ.ಕೋಟೆ ಸಭಾಂಗಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ದೈಹಿಕ ಶಿಕ್ಷಣ ನಿರ್ದೇಶಕರಾದ ಎಸ್.ಜೆ.ಪುಟ್ಟರಾಜುರವರಿಗೆ ಅಭಿವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆ ಶ್ರೇಷ್ಠ ಮಟ್ಟದಲ್ಲಿ ಇರಬೇಕು ಎಂಬುದಕ್ಕಾಗಿ ಗುರುಗಳು ದಂಡಿಸುತ್ತಾರೆ. ಬಾಲ್ಯದಲ್ಲಿ ತಿದ್ದದೇ, ತಪ್ಪಿಗೆ ಶಿಕ್ಷೆ ನೀಡಿದೇ ಕಲಿಸುವ ಶಿಕ್ಷಣವು ನಿಜವಾದ ಶಿಕ್ಷಣವೇ ಅಲ್ಲ. ವಿದ್ಯಾರ್ಥಿಗಳು ಬದುಕು ಹಸನಾಗಲಿ ಎಂದು ಮಾತ್ರ ಶಿಕ್ಷಕರು ಬಯಸುತ್ತಾರೆ. ಈ ನಿಟ್ಟಿನಲ್ಲಿ ಇಂದಿನ ಶಿಕ್ಷಣ ಪಾಲಕರ ಸಂಬಂಧ ಉನ್ನತೀಕರಣಗೊಳ್ಳಬೇಕು ಎಂದರು.
15 ವರ್ಷಗಳ ಹಿಂದೆ ನಮ್ಮಿಂದ ಪಾಠ ಕೇಳಿದ ಮಕ್ಕಳು ಇಂದು ಉನ್ನತ ಮಟ್ಟದ ಸ್ಥಾನಗಳಲ್ಲಿ ಇದ್ದಾರೆ. ಇನ್ನೂ ಕೆಲವರು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರೆಲ್ಲರು ಒಂದೆಡೆ ಸೇರಿ ನಮ್ಮನು ನೆನಪಿಸಿಕೊಂಡು ಅಭಿವಂದನೆ ಮಾಡುವುದು. ನನ್ನ ಬದುಕಿಗೆ ಸುವರ್ಣ ಘಳಿಗೆ ಎಂದು ಶ್ಲಾಘಿಸಿದರು.
ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ ಮಾತನಾಡಿ, ಪಾಠ ಹೇಳಿ ಜ್ಞಾನಾರ್ಜನೆ ಮಾಡಿಸಿ ಬುದುಕಿಗೆ ಬೆಳಕಾದ ಶಿಕ್ಷಕರನ್ನು ಎಂದಿಗೂ ವಿಧ್ಯಾರ್ಥಿಗಳು ಮರೆಯಬಾರದು ಎಂದು ಕಿವಿ ಮಾತು ನೀಡಿದರು. ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯೇಕವಾಗಿ ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ ಎಂದರು.
ಇದೇ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು 15 ವರ್ಷದಿಂದ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪುಟ್ಟರಾಜು ರವರಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಜಿವಿಕಾ ಜಿಲ್ಲಾ ಸಂಚಾಲಕ ಬಸವರಾಜು ಮಾತನಾಡಿ, ಪಾಠ ಮಾಡಿದ ಗುರುಗಳು ಯಾವುದೇ ಅಪೇಕ್ಷೆ ಇಲ್ಲದೆ ಶಿಷ್ಯರ ಭವಿಷ್ಯ ರೂಪಿಸುತ್ತಾರೆ. ಜೀವನಕ್ಕೆ ಮಾರ್ಗದರ್ಶಕರಾಗುತ್ತಾರೆ. ಆದರೆ ಇಂದಿನ ಶಿಕ್ಷಣ ಪದ್ಧತಿ ಸಾಕಷ್ಟು ಬದಲಾಗಿದೆ. ಮಕ್ಕಳಿಗೆ ದಂಡಿಸದೆ ಶಿಕ್ಷಿಸದೆ ಪಾಠ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ಮಂಜುನಾಥ, ಮಣಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂತೇನಿ, ಪ್ರಸನ್ನ, ದಮ್ಮರೂಪ, ಬೊರಮ್ಮ, ಮಂಜುನಾಥ, ಪುಟ್ಟರಾಜು, ಮಹಾದೇವಮ್ಮ, ರವಿಕುಮಾರ್, ದೈಹಿಕ ಶಿಕ್ಷಕರು ರಮೇಶ್, ನಾಗರಾಜು, ಶ್ರೀನಿವಾಸ, ಪ್ರಮೋದ್, ರವಿ, ಕಿರಣ್, ರಾಜೇಗೌಡ, ಚಿಕ್ಕನಾಯಕ, ಚಂದ್ರ, ಮಂಜುನಾಥ, ಗೌತಮ್, ಅಭಿಷೇಕ್, ದಿಲೀಪ್, ಮಹೇಶ್, ವಿಷ್ಣು, ಇನ್ನೂ ಹಳೆಯ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕ ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC