ಪಾವಗಡ: ಕೆ.ಟಿ.ಹಳ್ಳಿ ಗ್ರಾಮ ಪಂಚಾಯತ್ ದೇವಲಕೆರೆ ಗ್ರಾಮದ ST ಕಾಲೋನಿಯಲ್ಲಿ ಸುಮಾರು ವರ್ಷದಿಂದ CC ರಸ್ತೆ ದುರಸ್ತಿಯಿಂದ ಬೀದಿಯಲ್ಲಿ ಚರಂಡಿ ನೀರು ಹರಿದು ರಸ್ತೆ ಕೆಸರು ಗದ್ದೆಯಂತಾಗಿದ್ದು, ಯಾವುದೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳುತ್ತಿಲ್ಲ ಎಂದು ಬೀದಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರು ಸರಿಯಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವ ಕಾರಣ ರಸ್ತೆಯಲ್ಲಿಯೇ ನಿಂತು ದೊಡ್ಡ ಹೊಂಡಗಳಾಗಿ ನಿರ್ಮಾಣಗೊಂಡಿದ್ದು, ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಪರಿಣಮಿಸಿವೆ. ಕೊಳಚೆಯಿಂದಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಇಲ್ಲಿಯ ನಿವಾಸಿಗರು ಎದುರಿಸುತ್ತಿದ್ದಾರೆ. ಮನೆಯ ಮುಂದೆ ಸಾಕಷ್ಟು ನೀರು ಸಂಗ್ರಹಗೊಂಡಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡೆತಡೆಯಾಗಿದೆ.
ಈ ಕೊಳಚೆ ನೀರಿನಲ್ಲಿಯೇ ಮಕ್ಕಳು, ವಯೋವೃದ್ಧರು ಹಾಗೂ ಇತರರು ತಿರುಗಾಡುತ್ತಿದ್ದಾರೆ. ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ವ್ಯರಿತಿಕ್ತ ಪರಿಣಾಮ ಬೀರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ಕ್ರಮಕ್ಕೆ ಮುಂದಾಗಬೇಕಾಗಿದೆ.
ರಸ್ತೆಯ ಪಕ್ಕದಲ್ಲಿ ಚರಂಡಿ ಇಲ್ಲದ ಕಾರಣ ದಿನಬಳಕೆ ನೀರು ಮುಂದಕ್ಕೆ ಹರಿದುಹೋಗಲು ಸಾಧ್ಯವಾಗದೇ ಇರುವುದರಿಂದ ಈ ದುರಾವಸ್ಥೆಗೆ ಕಾರಣವಾಗಿದೆ, ಗ್ರಾಮ ಪಂಚಾಯಿತಿಯವರು ಪರಿಹಾರ ಕ್ರಮಕೈಗೊಳ್ಳಬೇಕಾಗಿದೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC