ಕೋಲಾರ: ತಲ್ವಾರ್ ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ ತಮ್ಮ ಮುನಿರಾಜು (40) ಕೊಲೆ ಮಾಡಿ ಬಳಿಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ.
ಬೆಳಗ್ಗೆ 6:30ರ ಸುಮಾರಿಗೆ ಕುರಿಗಳಿಗೆ ಮೇವು ನೀಡಲು ಹೋದ ಅಣ್ಣನನ್ನು ತಲ್ವಾರ್‌ನಿಂದ ಕೊಚ್ಚಿ ತಮ್ಮ ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ರಾಮಾಪುರದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ.
ಅಣ್ಣ ಚಲಪತಿ ಜಮೀನಿನಲ್ಲಿ ಸರಿಯಾಗಿ ಭಾಗ ಕೊಡದ ಹಿನ್ನೆಲೆ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಹಾಗೂ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC