nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹುಟ್ಟು ಹಬ್ಬ:  ಬಡ ರೋಗಿಗಳಿಗೆ ಹಣ್ಣು, ಬ್ರೆಡ್, ಹಾಲು ವಿತರಣೆ
    ಕೊರಟಗೆರೆ August 19, 2025

    ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹುಟ್ಟು ಹಬ್ಬ:  ಬಡ ರೋಗಿಗಳಿಗೆ ಹಣ್ಣು, ಬ್ರೆಡ್, ಹಾಲು ವಿತರಣೆ

    By adminAugust 19, 2025No Comments2 Mins Read
    sudhakarlal

    ಕೊರಟಗೆರೆ : ಜನ ಮೆಚ್ಚಿದ ನಾಯಕ, ಆಧುನಿಕ ಭಗೀರಥ ಮಾಜಿ ಶಾಸಕ ಪಿ.ಆರ್.ಸುಧಾಕರ್‌ ಲಾಲ್‌ರವರ 58ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸುಧಾಕರ್‌ ಲಾಲ್ ಅಭಿಮಾನಿ ಬಳಗ ಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ, ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದ್ದು, ಮಾಜಿ ಶಾಸಕ ಸುಧಾಕರ್‌ ಲಾಲ್ ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.

    ಮಾಜಿ ಶಾಸಕ ಪಿ.ಆರ್.ಸುಧಾಕರ್‌ ಲಾಲ್ ಶ್ರೀಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅಪ್ಪಾಜಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಣ್ಣನವರ, ವಿ.ಸೋಮಣ್ಣ, ಹಾಗೂ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಬಡವರ ಕೆಲಸಗಳನ್ನು ಮುಂದುವರೆಸಿಕೊಂಡು ಬಂದಿದ್ದೇನೆ, ಇಂದು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳ ಬಳಗವು ನನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿ ಅಭಿಮಾನ ತೋರಿದ್ದು, ಪ್ರತಿಯೊಬ್ಬರ ಪ್ರೀತಿಗೂ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.


    Provided by
    Provided by

    ಜೆಡಿಎಸ್ ಪಕ್ಷದ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಮಾಜಿ ಶಾಸಕ ಸುಧಾಕರ್‌ ಲಾಲ್ ಅವರ 58ನೇ ವರ್ಷ ಹುಟ್ಟು ಹಬ್ಬವನ್ನು ಬಡರೋಗಿಗಳಿಗೆ ಬ್ರೆಡ್, ಹಣ್ಣು, ಕಟ್ಟೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಅಭಿಮಾನಿಗಳ ಸಮ್ಮುಖದಲ್ಲಿ ಮಾಜಿ ಶಾಸಕರು ಕೇಕ್ ಕತ್ತರಿಸುವ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮುಂದಿನ ತಾ.ಪಂ, ಜಿ.ಪಂ ಚುನಾವಣೆ ಎದುರಿಸಲು ಈಗಾಗಲೇ ಪಕ್ಷವು ಹಲವಾರು ಸಿದ್ಧತೆ ಕೈಗೊಂಡಿದೆ ಎಂದು ಹೇಳಿದರು.

    ಸರ್ಕಾರ ಚುನಾವಣೆ ತಾ.ಪಂ. ಮತ್ತು ಜಿ.ಪಂ ಚುನಾವಣೆ ನಡೆಸುವಂತೆ ಕಾಣಿಸುತ್ತಿಲ್ಲ, ಜನ ಮೆಚ್ಚಿಸಲು ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾರೆ. ಡಿಸೆಂಬರ್‌ ನಲ್ಲಿ ಗ್ರಾ.ಪಂ ನಡೆಯಬಹುದೆಂಬ ಕುತೂಹಲವಿದೆ. ಸರ್ಕಾರದಲ್ಲಿನ ನಾಯಕರುಗಳೇ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಚುನಾವಣೆ ನಡೆಸುತ್ತಾರೆಂಬ ಭರವಸೆಯಂತು ಇಲ್ಲಾ, ಸ್ಥಳೀಯ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ, ಸಂವಿಧಾನ ಬದಲಾವಣೆ ಮಾಡುವ ಚಿಂತನೆ ನಡೆಸುತ್ತಿದಿಯಾ ಸರ್ಕಾರ ಎಂಬುದು ಪ್ರಶ್ನೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ ಮಾತನಾಡಿ, ಮಾಜಿ ಪಿ ಆರ್ ಶಾಸಕ ಸುಧಾಕರ್‌ ಲಾಲ್‌ ಹುಟ್ಟು ಹಬ್ಬವನ್ನು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಣೆ ಮಾಡಲಾಗುತ್ತಿದೆ. 2013 ರಿಂದ 2018ರವರೆಗೂ ಕ್ಷೇತ್ರದಲ್ಲಿ ಶಾಸಕರಾಗಿ ಗ್ರಾಮೀಣ ಭಾಗದ ಹಳ್ಳಗಳಿಗೆ ಚೆಕ್ ಡ್ಯಾಂ, ಗಂಗಾ ಕಲ್ಯಾಣ ಯೋಜನೆಯಲ್ಲಿ ರೈತರಿಗೆ ಪಂಪ್‌ ಸೆಟ್ ವಿತರಣೆ, ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ, ವಸತಿ ವ್ಯವಸ್ಥೆ, ಬಡ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಿ ಶಾಸ್ತ್ರ ಚಿಕಿತ್ಸೆಗೆ ಅನುಕೂಲ ಕಲ್ಪಿಸಿದ್ದು, ಇಂದಿಗೂ ಬಡಜನರ ನಿರಂತರ ಸಂಪರ್ಕದಲ್ಲಿದ್ದು ತಮ್ಮ ಸಾಮಾಜಿಕ ಸೇವೆಯನ್ನು ಮುಂದುವರೆಸಿದ್ದಾರೆ ಎಂದು ಹೇಳಿದರು.

    ಈ ವೇಳೆ ಜೆಡಿಎಸ್ ಯುವಾಧ್ಯಕ್ಷ ವೆಂಕಟೇಶ್, ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಪ.ಪಂ ಸದಸ್ಯ ಲಕ್ಷ್ಮಿ ನಾರಾಯಣ್, ಸಿದ್ದಮಲ್ಲಪ್ಪ, ಕೋಡ್ಲಹಳ್ಳಿ ವೆಂಕಟೇಶ್, ಮುಖಂಡರಾದ ಅಶ್ವತ್ಥ್ ನಾರಾಯಣರಾಜು, ಲಕ್ಷ್ಮಿನರಸಪ್ಪ, ರಮೇಶ್, ಮಂಜುನಾಥ್, ಸಂತೋಷ್, ಹರೀಶ್‌ ಬಾಬು, ಸಾಕಣ್ಣ, ಸಿದ್ದಪ್ಪ, ಹಯ್ಯದ್ ಖಾನ್, ಮಂಜುನಾಥ್, ಕಾಕಿ ಮಲ್ಲಯ್ಯ, ಶ್ರೀಧರ್, ಪಾಡುರಂಗ, ಮಧು ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಕಾರವಾರ:  ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ನೋಂದಣಿ…

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.