ಹಾಸನ: ಭಾರೀ ಬಾಳೆ ಮಳೆಯ ಹಿನ್ನೆಲೆ ಶಾಲೆಯ ಗೋಡೆಯೊಂದು ಕುಸಿದು ಬಿದ್ದಿರುವ ಘಟನೆ ಸಕಲೇಶಪುರದ ಕಡಗರವಳ್ಳಿ ಗ್ರಾಮದಲ್ಲಿ ನಡೆದಿದೆ.
ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿತ್ತು. ಆ.18ರಂದು ಶಾಲೆಗೆ ರಜೆ ಕೂಡ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಶಾಲೆಯ ಗೋಡೆ ಕುಸಿದು ಬಿದ್ದಿದೆ.
ಶಾಲೆಗೆ ರಜೆ ನೀಡಿದ್ದರಿಂದಾಗಿ ಭಾರೀ ಅನಾಹುತವವೊಂದು ತಪ್ಪಿದಂತಾಗಿದೆ. ಶಾಲೆ ಬೀಳುವ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಕೇಳಿ ಬಂದಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC