ಬೀದರ್: ಜಿಲ್ಲೆಯ ಔರಾದ –ಕಮಲನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದ ಬಹುತೇಕ ಜಮೀನುಗಳಿಗೆ ನೀರು ನುಗ್ಗಿದೆ.
ಔರಾದ್ ಕಮಲನಗರ, ಠಾಣಕುಶನೂರ್, ಬೆಳಕುಣಿ (ಚೌದ್ರಿ) ದಾಬಕಾ, ಸಂತಪುರ, ವಡಗಾಂವ್, ಸೇರಿದಂತೆ ಮತ್ತಿತರ ಗ್ರಾಮಗಳ ಜಮೀನುಗಳು ಜಲಾವೃತವಾಗಿವೆ ಎಂದು ರೈತರು ಅಳಲು ತೋಡಿಕೊಂಡರು.
ಜಮೀನುಗಳಲ್ಲಿ ನೀರು ನಿಂತ ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಲ್ಲಿ ಹತ್ತಿ, ಉದ್ದು ಹೆಸರು ಮತ್ತು ತೊಗರಿ ಸೋಯಾ, ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಒತ್ತಾಯಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC