ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದ ಬಿಎಂಆರ್ ಸಿಎಲ್ ಅಧಿಕಾರಿಗಳು ಇದೀಗ ಲಗೇಜ್ ಗೂ ಶುಲ್ಕ ವಿಧಿಸಲು ಮುಂದಾಗಿದ್ದಾರೆ.
ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು ಇನ್ನು ಮುಂದೆ ತಾವು ಕೊಂಡೊಯ್ಯುವ ಲಗೇಜ್‌ಗಳಿಗೂ ಟಿಕೆಟ್ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.
ದೇಶದಲ್ಲೇ ಬೆಂಗಳೂರು ಮೆಟ್ರೋ ಅತ್ಯಂತ ದುಬಾರಿ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಮಯದಲ್ಲೇ ಲಗೇಜ್‌ಗೂ ಶುಲ್ಕ ವಿಧಿಸಿರುವ ಈ ಕ್ರಮ ಜನಾಕ್ರೋಶಕ್ಕೆ ಕಾರಣವಾಗಿದೆ.
ತಾವು ಮೆಟ್ರೋದಲ್ಲಿ ಸಂಚರಿಸುತ್ತಿದ್ದಾಗ ತಮ ಬಳಿ ಇದ್ದ ಒಂದು ಬ್ಯಾಗ್ ಗೆ 30 ರೂ. ಶುಲ್ಕ ವಿಧಿಸಿರುವುದನ್ನು ಪೋಟೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅಪ್‌ಲೋಡ್ ಮಾಡಿ ತಮ ಆಕ್ರೋಶ ಹೊರ ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC