ಬೆಳ್ತಂಗಡಿ: ಧರ್ಮಸ್ಥಳ ಸುತ್ತಮುತ್ತ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿಯೊಬ್ಬ ಹೇಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ದೊರಕಿದೆ.
ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ ಮ್ಯಾನ್ ನನ್ನ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ ಮ್ಯಾನ್ ಗೆ ಎಸ್ ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆದಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC