ನಟ ದರ್ಶನ್ ಅವರ ಡೆವಿಲ್ ಸಿನಿಮಾದ `ಇದ್ರೆ ನೆಮ್ದಿಯಾಗ್ ಇರ್ಬೇಕ್ʼ ಹಾಡು ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಈ ಹಾಡಿನ ಬಿಡುಗಡೆಗೆ ದರ್ಶನ್ ಅಭಿಮಾನಿಗಳು ಹಲವು ದಿನಗಳಿಂದ ಕಾಯುತ್ತಿದ್ದರು. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ.
ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು. ಇಂದು ಈ ಹಾಡನ್ನು ರಿಲೀಸ್ ಮಾಡಲಾಗಿದೆ.
ಚಿತ್ರದ ನಿರ್ದೇಶಕ ಪ್ರಕಾಶ್ ವೀರ್, ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ದರ್ಶನ್ ಜೊತೆ ಚರ್ಚಿಸಿ ಇಂದು ಹಾಡನ್ನು ಬಿಡುಗಡೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


