ಬೆಂಗಳೂರು: ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜಗದೀಶ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಲುಕ್ ಔಟ್ ನೋಟೀಸ್ ಜಾರಿಯಾದ ಹಿನ್ನೆಲೆಯಲ್ಲಿ ದೆಹಲಿ ಏರ್ ಪೋರ್ಟ್‌ನಲ್ಲಿ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ವಶಕ್ಕೆ ಪಡೆದುಕೊಂಡು ನಗರಕ್ಕೆ ಕರೆತಂದಿದ್ದಾರೆ.
ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಕ್ಲು ಶಿವ ಹತ್ಯೆಯಾದ ನಂತರ ಆರೋಪಿ ಜಗದೀಶ್ ತಲೆಮರೆಸಿ ಕೊಂಡಿದ್ದನು. ಆತನ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ನಡೆಸುತ್ತಿದ್ದರೂ ಆತನ ಸುಳಿವು ಸಿಕ್ಕಿರಲಿಲ್ಲ.
ಆತ ಚನ್ನೈ ಮೂಲಕ ದುಬೈಗೆ ಪರಾರಿಯಾಗಿದ್ದಾನೆಂಬ ಮಾಹಿತಿ ಲಭ್ಯವಾಗಿತ್ತು. ಬಳಿಕ ಲುಕ್ ಔಟ್ ನೋಟೀಸ್ ಜಾರಿಮಾಡಲಾಗಿತ್ತು.ದೆಹಲಿ ಏರ್ ಪೋರ್ಟ್‌ನಲ್ಲಿ ಕಾಣಿಸಿಕೊಂಡ ಜಗ್ಗನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯನ್ನು ಆಧರಿಸಿ ಸಿಐಡಿ ಅಧಿಕಾರಿಗಳು ತಕ್ಷಣ ದೆಹಲಿಗೆ ತೆರಳಿ ಇಂದು ಮುಂಜಾನೆ ಆತನನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


