ಬೆಂಗಳೂರು: ಬಿಎಂಟಿಸಿ ಬಸ್ ಗಳಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಇದೀಗ ಸಾರಿಗೆ ಸಂಸ್ಥೆ ಅಪಘಾತ ತಡೆಗೆ ಕ್ರಮಕೈಗೊಳ್ಳಲು ಮುಂದಾಗಿದೆ.
ಇದರಂತೆ ಚಾಲಕರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಬಸ್ ನಿಗಮವು ಸುಮಾರು 3,000 ಬಿಎಂಟಿಸಿ ಬಸ್ ಮಾರ್ಗಗಳ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.
ಅಪಘಾತಗಳಿಗೆ ಒತ್ತಡ ಕೂಡ ಒಂದು ಪ್ರಮುಖ ಅಂಶ ಹೇಳಲಾಗುತ್ತಿದೆ. ಕೆಲಸದ ಸಮಯದಲ್ಲಿ ಬದಲಾವಣೆ ಇಲ್ಲದಿರುವುದು ಮತ್ತು ಕರ್ತವ್ಯದ ಸಮಯ ಮೀರಿ ಕೆಲಸ ಮಾಡುತ್ತಿರುವುದು ಚಾಲಕರಿಗೆ ಒತ್ತಡ ಹೆಚ್ಚಾಗುವಂತೆ ಮಾಡಿದೆ ಎಂದು ಚಾಲಕರು ಹಾಗೂ ಕಾರ್ಮಿಕ ಸಂಘಟನೆಗಳು ಹೇಳುತ್ತಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


